ಕ್ರಿಕೆಟ್

4 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಯುಜುವೇಂದ್ರ ಚಹಲ್-ಧನಶ್ರೀ ಅಧಿಕೃತ ವಿಚ್ಛೇದನ; 'ದೇವರೇ.. ನನ್ನ ರಕ್ಷಿಸಿದ' ಎಂದವರಾರು?

ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು.

4 ವರ್ಷಗಳ ದಾಂಪತ್ಯ ಜೀವನ ಅಂತ್ಯ: ಯುಜುವೇಂದ್ರ ಚಹಲ್-ಧನಶ್ರೀ ಅಧಿಕೃತ ವಿಚ್ಛೇದನ; 'ದೇವರೇ.. ನನ್ನ ರಕ್ಷಿಸಿದ' ಎಂದವರಾರು?
ಯುಜುವೇಂದ್ರ ಚಹಲ್ -ಧನಶ್ರೀ ವರ್ಮಾ
Published On :

ಮುಂಬಯಿ: ಭಾರತೀಯ ಕ್ರಿಕೆಟ್ ತಂಡದ ಕ್ರಿಕೆಟಿಗ ಯುಜುವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ವಿಚ್ಛೇದನದ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಮಾತು ಕೇಳಿ ಬರುತ್ತಿದ್ದವು. ಇಬ್ಬರ ನಡುವೆ ಸಂಬಂಧ ಸರಿಯಿಲ್ಲ ಎನ್ನುವ ಬಗ್ಗೆ ವದಂತಿಗಳು ಹರಿದಾಡುತ್ತಿರುವಾಗಲೇ, ಯುಜ್ವೇಂದ್ರ ಮತ್ತು ಧನಶ್ರೀ ವಿಚ್ಛೇದನ ಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

ಡಿವೋರ್ಸ್‌ ಪಡೆದ ನಂತರ ಚಹಲ್‌ ಕೈಮಗಿಯುತ್ತಿರುವ ಹನುಮಂತನ ಫೋಟೋ ಹಾಕಿದ್ದಾರೆ. ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಚಹಲ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.