ಕ್ರಿಕೆಟ್

Champions Trophy 2025: 51ನೇ ಶತಕ; Virat Kohli ಅಬ್ಬರಕ್ಕೆ Sachin Tendulkar ಮತ್ತೆರಡು ದಾಖಲೆ ಪುಡಿ!

ವಿರಾಟ್ ಕೊಹ್ಲಿ 50ನೇ ಶತಕ 2023 ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಾಖಲಿಸಿದ್ದರು.

Champions Trophy 2025: 51ನೇ ಶತಕ; Virat Kohli ಅಬ್ಬರಕ್ಕೆ Sachin Tendulkar ಮತ್ತೆರಡು ದಾಖಲೆ ಪುಡಿ!
ವಿರಾಟ್ ಕೊಹ್ಲಿ- ಸಚಿನ್ ತೆಂಡೂಲ್ಕರ್ — online desk
Published On :

ದುಬೈ: ದುಬೈ ನಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 51ನೇ ಶತಕ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ವಿರಾಟ್ ಕೊಹ್ಲಿಯ ಮತ್ತೊಂದು ಐತಿಹಾಸಿಕ ಶತಕ ಇದಾಗಿದ್ದು, ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 2 ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಮೊದಲನೆಯದ್ದು ಏಕದಿನ ಪಂದ್ಯ ಫಾರ್ಮೆಟ್ ನಲ್ಲಿ ಅತಿ ವೇಗದ 14,000 ರನ್ ಗಳಿಸುವ ಮೂಲಕ ಸಚಿನ್ ದಾಖಲೆಯನ್ನು ಮುರಿದಿದ್ದರೆ,

ODI Format ನಲ್ಲಿ 51 ಶತಕ ಗಳಿಸಿದ ಮೊದಲ ಆಟಗಾರ ಕೊಹ್ಲಿ!

51ನೇ ಶತಕ ದಾಖಲಿಸಿದ ಮೊದಲ ಆಟಗಾರನಾಗುವ ಮೂಲಕ ಒಡಿಐ ಅಂತಾರಾಷ್ಟ್ರೀಯ ಫಾರ್ಮೆಟ್ ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ್ದ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಏಕದಿನ ಶತಕಗಳನ್ನು (49) ಸಿಡಿಸಿದ್ದ ದಾಖಲೆಯನ್ನು ಮುರಿದಿದ್ದರು ಮತ್ತು ಏಕದಿನ ಶತಕಗಳ ಅರ್ಧ ಶತಕದ ಸಂಖ್ಯೆ ತಲುಪಿದ ಮೊದಲ ಅಂತರರಾಷ್ಟ್ರೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ವಿರಾಟ್ ಕೊಹ್ಲಿ 50ನೇ ಶತಕ 2023 ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಾಖಲಿಸಿದ್ದರು. ಆ ಪಂದ್ಯದಲ್ಲಿ ತೆಂಡೂಲ್ಕರ್ 49 ನೇ ಶತಕದ ದಾಖಲೆಯನ್ನು ಕೊಹ್ಲಿ ಮುರಿದಿದ್ದರು. 111 ಎಸೆತಗಳಲ್ಲಿ ವಿರಾಟ್ ಕೊಹ್ಲಿ ಶತಕ ಗಳಿಸಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.