Champions Trophy 2025: "Virat" ಆಟ; ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆ ಉಡೀಸ್!
Virat kohli ಅಪರೂಪದ ದಾಖಲೆಗೆ ಕ್ರೀಡಾಭಿಮಾನಿಗಳು ಫಿದಾ ಆಗಿದ್ದಾರೆ. ಹಾಗಾದರೆ ವಿರಾಟ್ ಕೊಹ್ಲಿ ನಿರ್ಮಿಸಿದ ಆ ಅಪರೂಪದ ದಾಖಲೆ ಯಾವುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಈ ಮಧ್ಯೆ ಒಂದೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ 3 ವಿಶ್ವದಾಖಲೆಯನ್ನು ಪುಡಿ ಮಾಡಿದ್ದಾರೆ.
Virat kohli ಅಪರೂಪದ ದಾಖಲೆಗೆ ಕ್ರೀಡಾಭಿಮಾನಿಗಳು ಫಿದಾ ಆಗಿದ್ದಾರೆ. ಹಾಗಾದರೆ ವಿರಾಟ್ ಕೊಹ್ಲಿ ನಿರ್ಮಿಸಿದ ಆ ಅಪರೂಪದ ದಾಖಲೆ ಯಾವುದು ಎಂಬ ಬಗ್ಗೆ ಇಲ್ಲಿದೆ ಮಾಹಿತಿ
ಮೊಹಮ್ಮದ್ ಅಜರುದ್ದೀನ್ ಸಾಧನೆ ಸರಿಗಟ್ಟಿದ ಕೊಹ್ಲಿ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ. ODI ನಲ್ಲಿ ಭಾರತೀಯ ಫೀಲ್ಡರ್ ಓರ್ವ ಗಳಿಸಿದ ಗರಿಷ್ಠ ಕ್ಯಾಚ್ ಗಳ ದಾಖಲೆಯನ್ನು ಈಗ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಪಾಕ್ ವಿರುದ್ಧದ ಇನ್ನಿಂಗ್ಸ್ ನಲ್ಲಿ ಕೊಹ್ಲಿ 2 ಕ್ಯಾಚ್ ಪಡೆದಿದ್ದು, ಒಡಿಐ ವೃತ್ತಿ ಜೀವನದಲ್ಲಿ ಕೊಹ್ಲಿ 158 ಕ್ಯಾಚ್ ಗಳನ್ನು ಗಳಿಸಿದ್ದಾರೆ.
ವೇಗವಾಗಿ 14000 ರನ್ ಗಳಿಸಿದ ದಾಖಲೆ
ಏಕದಿನ ಪಂದ್ಯ ಫಾರ್ಮೆಟ್ ನಲ್ಲಿ ಅತಿ ವೇಗದ 14,000 ರನ್ ಗಳಿಸುವ ಮೂಲಕ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


