ICC Champions Trophy 2025: ಶತಕ ಸಿಡಿಸಿ ಪತ್ನಿಗೆ ಅರ್ಪಿಸಿದ Virat Kohli; ಪ್ರತಿಕ್ರಿಯೆ ಕೊಟ್ಟ Anushka Sharma
ದುಬೈನ ದುಬೈ ಆಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 242 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಅಕ್ಷರಶಃ ಮ್ಯಾಚ್ ವಿನ್ನರ್ ಆಗಿ ಪರಿಣಮಿಸಿದ್ದರು.

ದುಬೈದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭರ್ಜರಿ ಫಾರ್ಮ್ ಗೆ ಮರಳಿರುವ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ, ತಮ್ಮ ಶತಕವನ್ನು ಪತ್ನಿ ಅನುಷ್ಕಾ ಶರ್ಮಾಗೆ ಅರ್ಪಿಸಿದ್ದಾರೆ.
ಹೌದು.. ದುಬೈನ ದುಬೈ ಆಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 242 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಅಕ್ಷರಶಃ ಮ್ಯಾಚ್ ವಿನ್ನರ್ ಆಗಿ ಪರಿಣಮಿಸಿದ್ದರು. ಪಾಕಿಸ್ತಾನದ ಎಲ್ಲ ಬೌಲಿಂಗ್ ತಂತ್ರಗಾರಿಕೆಗಳನ್ನೂ ಛಿದ್ರ ಮಾಡಿದ ಕೊಹ್ಲಿ ಪಂದ್ಯದ ಕೊನೆಯಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.
ಈ ವೇಳೆ ಕೊಹ್ಲಿ ತಮ್ಮ ಶತಕವನ್ನು ಪತ್ನಿ ಅನುಷ್ಕಾ ಶರ್ಮಾಗೆ ಅರ್ಪಿಸಿ ತಾವು ಕುತ್ತಿಗೆಯಲ್ಲಿ ಧರಿಸಿರುವ ಉಂಗುರಕ್ಕೆ ಮುತ್ತು ನೀಡಿ ಪತ್ನಿಯನ್ನು ನೆನೆದರು. ಇದಕ್ಕೆ ಅನುಷ್ಕಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದು, ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ಅನುಷ್ಕಾ, ತಮ್ಮ ಪತಿಯ ಮೇಲಿನ ಪ್ರೀತಿಯನ್ನು ಪೋಸ್ಟ್ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನಕ್ಕೆ ಅನುಷ್ಕಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪತಿ ವಿರಾಟ್ ಆಡುವ ಪಂದ್ಯಗಳಿಗೆ ಕ್ರೀಡಾಂಗಣಕ್ಕೆ ತೆರಳಿ ಭಾರತ ತಂಡವನ್ನು ಪ್ರೋತ್ಸಾಹಿಸುತ್ತಿದ್ದ ಅನುಷ್ಕಾ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡು ತಮ್ಮ ಅಭಿಮಾನ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
ಅಂದಹಾಗೆ ಭಾನುವಾರ ರಾತ್ರಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ವಿರಾಟ್ ಕೊಹ್ಲಿ ಅಜೇಯ 100 ಗಳಿಸಿ ಭಾರತ ತಂಡ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



