Smriti Mandhana: ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ!
2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ 13 ಇನ್ನಿಂಗ್ಸ್ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ.
ಉಳಿದಂತೆ ಲಾರಾ ವೊಲ್ವಾರ್ಡ್ (697), ಟ್ಯಾಮಿ ಬ್ಯೂಮಾಂಟ್ (554) ಮತ್ತು ಹೇಲಿ ಮ್ಯಾಥ್ಯೂಸ್ (469) ರನ್ ಕಲೆ ಹಾಕಿದ್ದಾರೆ.
ಮಂಧಾನ 57.86ರ ಸರಾಸರಿಯಲ್ಲಿ 95.15 ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಅವರು ಈ ವರ್ಷದಲ್ಲಿ ನಾಲ್ಕು ಶತಕ ಗಳಿಸುವ ಮೂಲಕ ಮಹಿಳಾ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಮಾಡಿದ್ದಾರೆ. 95 ಬೌಂಡರಿ ಹಾಗೂ ಆರು ಸಿಕ್ಸರ್ ಹೊಡೆದಿದ್ದಾರೆ.
2024ರಲ್ಲಿನ ಅದ್ಬುತ ಪ್ರದರ್ಶನವು ಐಸಿಸಿ ಮಹಿಳಾ ಚಾಂಪಿಯನ್ ಶಿಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿಸ್ಮೃತಿ ಮಂಧಾನ ಸ್ಥಾನವನ್ನು ಭದ್ರಪಡಿಸಿದೆ. ಇದು 2025ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವ ಕಪ್ ಗೆ ಅರ್ಹತೆ ಪಡೆಯುವ ಏಕದಿನ ಮಹಿಳಾ ಕ್ರಿಕೆಟರ ಪಟ್ಟಿ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



