Ranji Trophy: 6 ರನ್ ಗಳಿಸಿ ವಿರಾಟ್ ಕೊಹ್ಲಿ ಔಟ್; ಕ್ಷಣದಲ್ಲೇ ಕ್ರೀಡಾಂಗಣದಿಂದ ಹೊರನಡೆದ ಫ್ಯಾನ್ಸ್!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್‌ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.

ನವದೆಹಲಿ: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದು, ಕೊಹ್ಲಿ ಬ್ಯಾಟಿಂಗ್ ನೋಡಲು ಜಮಾಯಿಸಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟಾಗಿದೆ.
ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್‌ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.
ಕೊಹ್ಲಿ ದೆಹಲಿ ತಂಡವನ್ನು ಪ್ರತನಿಧಿಸುತ್ತಿದ್ದು, 15 ಎಸೆತಗಳಲ್ಲಿ ಆರು ರನ್ ಗಳಿಸಿ ಔಟ್ ಆಗಿದ್ದಾರೆ. ಬಲಗೈ ವೇಗಿ ಹಿಮಾಂಶು ಸಾಂಗ್ವಾನ್ ಅವರ ಎಸೆತದಲ್ಲಿ ಬೋಲ್ಡ್ ಆಗಿದ್ದಾರೆ. ಹಿಂದಿನ ಎಸೆತದಲ್ಲಿ ಕೊಹ್ಲಿ ಬೌಂಡರಿ ಬಾರಿಸಿದ್ದರು. ಅದೇ ರೀತಿಯ ಶಾಟ್ ಅನ್ನು ಪ್ರಯತ್ನಿಸಲು ಕೊಹ್ಲಿ ಮುಂದಾದಾಗ ಚೆಂಡು ಅವರತ್ತ ಹೆಚ್ಚು ಸ್ವಿಂಗ್ ಆಗಿದ್ದರಿಂದ ಕೊಹ್ಲಿ ವಿಕೆಟ್ ಕಳೆದುಕೊಳ್ಳಬೇಕಾಯಿತು.
36 ವರ್ಷದ ಬ್ಯಾಟರ್ ಸುಮಾರು 12 ವರ್ಷಗಳ ನಂತರ ರಣಜಿ ಟ್ರೋಫಿಯಲ್ಲಿ ಮೈದಾನಕ್ಕಿಳಿದಿದ್ದಾರೆ. 2012ರ ನವೆಂಬರ್‌ನಲ್ಲಿ ಉತ್ತರ ಪ್ರದೇಶ ವಿರುದ್ಧ ಗಾಜಿಯಾಬಾದ್‌ನಲ್ಲಿ ನಡೆದ ಪಂದ್ಯಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.
ಟಾಸ್ ಗೆದ್ದ ದೆಹಲಿ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ರೈಲ್ವೇಸ್ ತಂಡ ಮೊದಲ ಇನಿಂಗ್ಸ್‌ನಲ್ಲಿ 67.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿತ್ತು. ತನ್ನ ಇನಿಂಗ್ಸ್ ಆರಂಭಿಸಿರುವ ದೆಹಲಿ ಸದ್ಯ 41 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ. 30 ಓವರ್‌ಗಳ ಅಂತ್ಯಕ್ಕೆ ದೆಹಲಿ 4 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



