ಕ್ರಿಕೆಟ್

3ನೇ ಟೆಸ್ಟ್: ವಾಷಿಂಗ್ಟನ್ ಮ್ಯಾಜಿಕ್; ಇಂಗ್ಲೆಂಡ್ ಧೂಳಿಪಟ; ಭಾರತಕ್ಕೆ ಗೆಲ್ಲಲು 193 ರನ್ ಗುರಿ!

ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು 5 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 17 ರನ್ ಬಾರಿಸಿದೆ. ಯಶಸ್ವಿ ಜೈಸ್ವಾಲ್ ಶೂನ್ಯಕ್ಕೆ ಔಟಾದರು.

3ನೇ ಟೆಸ್ಟ್: ವಾಷಿಂಗ್ಟನ್ ಮ್ಯಾಜಿಕ್; ಇಂಗ್ಲೆಂಡ್ ಧೂಳಿಪಟ; ಭಾರತಕ್ಕೆ ಗೆಲ್ಲಲು 193 ರನ್ ಗುರಿ!
ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯ
Published On :

ಲಂಡನ್: ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯ ಲಾರ್ಡ್ಸ್ ನಲ್ಲಿ ನಡೆಯುತ್ತಿದೆ. ವಾಷಿಂಗ್ಟನ್ ಸುಂದರ್ ಮಾರಣಾಂತಿಕ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 2ನೇ ಇನ್ನಿಂಗ್ಸ್ ನಲ್ಲಿ 192 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು 193 ರನ್ ಗಳ ಸಾಧಾರಣ ಮೊತ್ತ ನೀಡಿದೆ.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್ ಗಳಿಸಿತ್ತು. ನಂತರ ಮೊದಲ ಇನ್ನಿಂಗ್ಸ್‌ ಆರಂಭಿಸಿದ ಭಾರತ ಸಹ 387 ರನ್ ಗಳಿಗೆ ಆಲೌಟ್ ಆಯಿತು. ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಬ್ಯಾಟರ್ ಗಳನ್ನು ಭಾರತೀಯ ಬೌಲರ್ ಗಳು ಕಾಡಿದರು. ನಾಲ್ಕನೇ ದಿನದಂದು ಇಂಗ್ಲೆಂಡ್ 192 ರನ್ ಗಳಿಗೆ ಆಲೌಟ್ ಆಯಿತು. ಇನ್ನು ಭಾರತ ಈ ಟೆಸ್ಟ್ ಪಂದ್ಯ ಗೆಲ್ಲಲು 193 ರನ್ ಸಿಡಿಸಬೇಕಿದೆ. ಭಾರತದ ಪರ ವಾಷಿಂಗ್ಟನ್ ಸುಂದರ್ 4 ವಿಕೆಟ್, ಜಸ್ ಪ್ರೀತ್ ಬುಮ್ರಾ ಮತ್ತು ಸಿರಾಜ್ ತಲಾ 2 ವಿಕೆಟ್ ಪಡೆದಿದ್ದಾರೆ.

ಸದ್ಯ ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು 5 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 17 ರನ್ ಬಾರಿಸಿದೆ. ಯಶಸ್ವಿ ಜೈಸ್ವಾಲ್ ಶೂನ್ಯಕ್ಕೆ ಔಟಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.