ಭಾರತದ ವಿರುದ್ಧ 3ನೇ ಟೆಸ್ಟ್ ಪಂದ್ಯ ಗೆದ್ದರೂ WTC ಅಂಕಪಟ್ಟಿಯಲ್ಲಿ ಕುಸಿದ ಇಂಗ್ಲೆಂಡ್; ಕಾರಣ ಇಲ್ಲಿದೆ...
ಸೋಮವಾರ 22 ರನ್‌ಗಳಿಂದ ಗೆದ್ದ ಮೂರನೇ ಟೆಸ್ಟ್ ಪಂದ್ಯದ ನಂತರ ನಾಯಕ ಬೆನ್ ಸ್ಟೋಕ್ಸ್ ಮತ್ತು ತಂಡಕ್ಕೆ ಪಂದ್ಯ ಶುಲ್ಕದ ಶೇ 10 ರಷ್ಟು ದಂಡ ವಿಧಿಸಲಾಯಿತು.

ಲಂಡನ್: ಲಾರ್ಡ್ಸ್‌ನಲ್ಲಿ ನಡೆದ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಎರಡು ಅಂಕಗಳನ್ನು ಕಳೆದುಕೊಂಡ ನಂತರ ಇಂಗ್ಲೆಂಡ್ ಕ್ರಿಕೆಟ್ ತಂಡ ಬುಧವಾರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಸೋಮವಾರ 22 ರನ್‌ಗಳಿಂದ ಗೆದ್ದ ಮೂರನೇ ಟೆಸ್ಟ್ ಪಂದ್ಯದ ನಂತರ ನಾಯಕ ಬೆನ್ ಸ್ಟೋಕ್ಸ್ ಮತ್ತು ತಂಡಕ್ಕೆ ಪಂದ್ಯ ಶುಲ್ಕದ ಶೇ 10 ರಷ್ಟು ದಂಡ ವಿಧಿಸಲಾಯಿತು.
ಇಂಗ್ಲೆಂಡ್ ಕ್ರಿಕೆಟ್ ತಂಡವು ನಿಗದಿತ ಸಮಯದಲ್ಲಿ ನಿರ್ದಿಷ್ಟ ಸಂಖ್ಯೆಯ ಓವರ್‌ಗಳನ್ನು ಬೌಲಿಂಗ್ ಮಾಡಬೇಕಿತ್ತು. ಆದರೆ, ವಿಳಂಬಗಳಿಗೆ (ಗಾಯಗಳು ಅಥವಾ ಬ್ರೇಕ್) ಅವಕಾಶ ನೀಡಿದ ನಂತರವೂ, ಎರಡು ಓವರ್‌ಗಳನ್ನು ಕಡಿಮೆ ಬೌಲಿಂಗ್ ಮಾಡಿದರು. ಈ ಕಾರಣದಿಂದಾಗಿ, ಪಂದ್ಯದ ರೆಫರಿ ರಿಚಿ ರಿಚರ್ಡ್ಸನ್ ಅವರಿಗೆ ಶಿಕ್ಷೆಯನ್ನು ವಿಧಿಸಿದ್ದಾರೆ.
ಭಾರತವು WTC ಪಾಯಿಂಟ್ಸ್ ಟೇಬಲ್‌ನಲ್ಲಿ ಸದ್ಯ ನಾಲ್ಕನೇ ಸ್ಥಾನದಲ್ಲಿದೆ.
'ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಸ್ಲೋ-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡದ ಪ್ರತಿ ಓವರ್‌ಗೆ ಅವರ ಪಂದ್ಯ ಶುಲ್ಕದ ಶೇ 5 ರಷ್ಟು ದಂಡ ವಿಧಿಸಲಾಗುತ್ತದೆ' ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.
'ಇದಲ್ಲದೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆಟದ ನಿಯಮಗಳ ಆರ್ಟಿಕಲ್ 16.11.2ರ ಪ್ರಕಾರ, ಕಡಿಮೆ ಬೌಲಿಂಗ್ ಮಾಡಿದ್ದಕ್ಕಾಗಿ ಪ್ರತಿ ಓವರ್‌ಗೆ ಒಂದು ಅಂಕವನ್ನು ಕಡಿಮೆಮಾಡಲಾಗುತ್ತದೆ. ಇದರ ಪರಿಣಾಮವಾಗಿ, ಇಂಗ್ಲೆಂಡ್‌ನ ಒಟ್ಟು ಅಂಕಗಳಿಂದ ಎರಡು ಅಂಕಗಳನ್ನು ಕಡಿತಗೊಳಿಸಲಾಗಿದೆ' ಎಂದು ಅದು ಹೇಳಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಇಂಗ್ಲೆಂಡ್‌ನ ಒಟ್ಟು 36 ಅಂಕಗಳ ಪೈಕಿ 24 ರಿಂದ 22ಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ತಂಡದ ಪಾಯಿಂಟ್ ಶೇಕಡಾವಾರು (PCT) ಶೇ 66.67 ರಿಂದ 61.11ಕ್ಕೆ ಇಳಿದಿದೆ. ಹೀಗಾಗಿ, ಇಂಗ್ಲೆಂಡ್ ಮೂರನೇ ಸ್ಥಾನಕ್ಕೆ ಕುಸಿದಿದ್ದು, 66.67 PCT ಹೊಂದಿರುವ ಶ್ರೀಲಂಕಾ ಎರಡನೇ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ಇದುವರೆಗಿನ ತಮ್ಮ ಮೂರು ಪಂದ್ಯಗಳನ್ನು ಗೆದ್ದು ಶೇ 100 ಅಂಕಗಳೊಂದಿಗೆ WTC ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಪ್ರಸ್ತಾವಿತ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ.
ಮೈದಾನದಲ್ಲಿದ್ದ ಅಂಪೈರ್‌ಗಳಾದ ಪಾಲ್ ರೀಫೆಲ್ ಮತ್ತು ಶರ್ಫುದ್ದೌಲಾ ಇಬ್ನೆ ಶಾಹಿದ್, ಮೂರನೇ ಅಂಪೈರ್ ಅಹ್ಸಾನ್ ರಾಜಾ ಮತ್ತು ನಾಲ್ಕನೇ ಅಂಪೈರ್ ಗ್ರಹಾಂ ಲಾಯ್ಡ್ ಆರೋಪ ಹೊರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



