MS ಧೋನಿ ಸೇರಿದಂತೆ ಏಳು ಮಂದಿಗೆ 'ICC ಹಾಲ್ ಆಫ್ ಫೇಮ್' ಗೌರವ!
ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಏಳು ಮಂದಿ ಐಸಿಸಿ 2025ರ ಹಾಲ್ ಆಫ್ ಫೇಮ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಲಂಡನ್: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಏಳು ಮಂದಿ ICC ಹಾಲ್ ಆಫ್ ಫೇಮ್ ಗೌರವಕ್ಕೆ ಭಾಜನರಾಗಿದ್ದಾರೆ.
ಲಂಡನ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಐವರು ಪುರುಷರು ಮತ್ತು ಇಬ್ಬರು ಮಹಿಳಾ ಕ್ರಿಕೆಟಿಗರು ಸೇರಿದಂತೆ ಒಟ್ಟು ಏಳು ಮಂದಿಯನ್ನು ಐಸಿಸಿ 2025ರ ಹಾಲ್ ಆಫ್ ಫೇಮ್ ಗೆ ಸೇರಿಸಿದೆ.
ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್, ಹಾಶಿಮ್ ಆಮ್ಲಾ, ಆಸ್ಟ್ರೇಲಿಯಾದ ಮ್ಯಾಥ್ಯೋ ಹೇಡನ್, ನ್ಯೂಜಿಲೆಂಡ್ ನ ಡೇನಿಯಲ್ ವೆಟ್ಟೋರಿ, ಇಂಗ್ಲೆಂಡ್ ನ ಸಾರಾ ಟೇಲರ್ ಮತ್ತು ಪಾಕಿಸ್ತಾನದ ಸನಾ ಮಿರ್ ಐಸಿಸಿ 2025ರ ಹಾಲ್ ಆಫ್ ಫೇಮ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಧೋನಿ ಅವರ ಅದ್ಬುತ ನಾಯಕತ್ವ, ಸ್ಮರಣೀಯ ವೃತ್ತಿಜೀವನ ಹಾಗೂ ಕ್ರಿಕೆಟ್ ಗೆ ನೀಡಿದ ಕೊಡುಗೆಗಾಗಿ ಈ ಗೌರವ ನೀಡಲಾಗಿದೆ ಎಂದು ICC ಪ್ರಕಟಣೆಯಲ್ಲಿ ತಿಳಿಸಿದೆ.
ಧೋನಿ ಅವರ ನಾಯಕತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್, 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. 2004ರಲ್ಲಿ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4,876 ರನ್ ಗಳಿಸಿದ್ದರೆ 350 ಏಕದಿನ ಪಂದ್ಯಗಳಲ್ಲಿ 10, 773 ರನ್ ಗಳಿಸಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ 824 ವಿಕೆಟ್ ಕಬಳಿಸಿದ್ದಾರೆ.
'ICC ಹಾಲ್ ಆಫ್ ಫೇಮ್' ಗೌರವ ಕುರಿತು ಪ್ರತಿಕ್ರಿಯಿಸಿರುವ ಮಹೇಂದ್ರ ಸಿಂಗ್ ಧೋನಿ, ಪ್ರಪಂಚದಾದ್ಯಂತದ ಕ್ರಿಕೆಟಿಗರ ಕೊಡುಗೆಗಳನ್ನು ಗುರುತಿಸುವ ಐಸಿಸಿ ಹಾಲ್ ಆಫ್ ಫೇಮ್‌ನಲ್ಲಿ ಹೆಸರಿಸಿರುವುದು ಗೌರವವಾಗಿದೆ. ಅಂತಹ ಸಾರ್ವಕಾಲಿಕ ಶ್ರೇಷ್ಠರ ಜೊತೆಗೆ ನನ್ನ ಹೆಸರನ್ನು ನೆನಪಿಸಿಕೊಳ್ಳುವುದು ಅದ್ಭುತ ಅನುಭವವಾಗುತ್ತಿದೆ. ಇದು ನನಗೆ ಎಂದೆಂದಿಗೂ ಒಂದು ವಿಶೇಷ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



