India vs England: ತಾಯಿಗೆ ಹೃದಯಾಘಾತ; ಲಂಡನ್ ನಿಂದ ಭಾರತಕ್ಕೆ Gautam Gambhir ದೌಡು
ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್ ಪ್ರವಾಸ ಮೊಟಕು ಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ.

ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ತಾಯಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಹೌದು.. ಜೂನ್ 11 ರಂದು ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಇಂಗ್ಲೆಂಡ್ ಪ್ರವಾಸ ಮೊಟಕು ಗೊಳಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಗಂಭೀರ್ ಅವರ ತಾಯಿಗೆ ಹೃದಯಾಘಾತವಾದ ಹಿನ್ನಲೆಯಲ್ಲಿ ಗಂಭೀರ್ ಭಾರತಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಗಂಭೀರ್ ಅವರ ತಾಯಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದಾಗಿ ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತ ತಂಡದ ಇಂಗ್ಲೆಂಡ್ ಪ್ರವಾಸ ಮಧ್ಯೆ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಅವರು ಯಾವಾಗ ಇಂಗ್ಲೆಂಡ್ಗೆ ಹಿಂತಿರುಗುತ್ತಾರೆ ಎಂಬುದು ಇನ್ನೂ ತಿಳಿದಿಲ್ಲ. ಆದಾಗ್ಯೂ ಅವರ ನಿರ್ಧಾರವು ತಾಯಿಯವರ ಆರೋಗ್ಯ ಹೇಗಿದೆ ಎಂಬುದರ ಮೇಲೆ ಅವಲಂಬಿತವಾಗಿರಬಹುದು ಎಂದು ಹೇಳಲಾಗಿದೆ.
ಶುಭ್ಮನ್ ಗಿಲ್ ಅವರ ನಾಯಕತ್ವದಲ್ಲಿ ಯುವ ಭಾರತ ತಂಡವನ್ನು ಕಟ್ಟಿಕೊಂಡು ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ಗೆ ಹಾರಿದ್ದ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಇದೀಗ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ತಂಡವನ್ನು ತೊರೆದು ಭಾರತಕ್ಕೆ ಮರಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜೂನ್ 20 ರಂದು ಆರಂಭವಾಗಲಿದ್ದು, ಸರಣಿಯ ಆರಂಭಿಕ ಪಂದ್ಯ ಹೆಡಿಂಗ್ಲಿಯಲ್ಲಿ ಆರಂಭವಾಗಲಿದೆ. ತಂಡದ ಹಿರಿಯ ಆಟಗಾರರಾದ ಆರ್ ಅಶ್ವಿನ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿದ್ದು, ಇದೀಗ ಈ ತ್ರಿವಳಿ ಆಟಗಾರರಿಲ್ಲದೇ ತಂಡ ಮೊದಲ ಬಾರಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುತ್ತಿದೆ. ಇದೀಗ ಗಾಯದ ಮೇಲೆ ಬರೆ ಎಂಬಂತೆ ಕೋಚ್ ಗಂಭೀರ್ ಕೂಡ ತುರ್ತು ಪರಿಸ್ಥಿತಿಯಿಂದಾಗಿ ತಂಡ ತೊರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



