ಅತ್ತ RCB, ಇತ್ತ ಕರ್ನಾಟಕ ಬುಲ್ಡೋಜರ್ಸ್: ಸೆಮೀಸ್ ನಲ್ಲಿ ಕಿಚ್ಚಾ ಸುದೀಪ್ ಪಡೆಗೆ ಸೋಲು, ಫೈನಲ್ ಗೆ ಚೆನ್ನೈ ಲಗ್ಗೆ!
ಮೈಸೂರಿನ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಸೆಮಿ ಫೈನಲ್ ಕಾಳಗದಲ್ಲಿ ಚೆನ್ನೈ ರೈನೋಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಮೈಸೂರು: ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಆರ್ ಸಿಬಿ ಮಹಿಳಾ ತಂಡ ಸೋತ ಬೆನ್ನಲ್ಲೇ ಇತ್ತ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಚೆನ್ನೈ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ನಲ್ಲಿ ಮುಗ್ಗರಿಸಿದೆ.
ಹೌದು.. ಮೈಸೂರಿನ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಇಂದು ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಸೆಮಿ ಫೈನಲ್ ಕಾಳಗದಲ್ಲಿ ಚೆನ್ನೈ ರೈನೋಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮಾತ್ರವಲ್ಲದೇ ಸಿಸಿಎಲ್ 2025ರ ಫೈನಲ್ ಹಂತಕ್ಕೆ ಪ್ರವೇಶ ಪಡೆದಿದೆ. ಫೈನಲ್ ನಲ್ಲಿ ಚೆನ್ನೈ ತಂಡ ಪಂಜಾಬ್ ತಂಡವನ್ನು ಎದುರಿಸಲಿದೆ.
ನಟ ಕಿಚ್ಚಾ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ನೀಡಿದ 130 ರನ್ ಗಳ ಗರಿ ಬೆನ್ನಟ್ಟಿದ ಚೆನ್ನೈ ರೈನೋಸ್ ತಂಡ 9.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿ 7 ವಿಕೆಟ್ ಅಂತರದಲ್ಲಿ ಗೆದ್ದು ಬೀಗಿತು. ಚೆನ್ನೈ ಪರ 2ನೇ ಇನ್ನಿಂಗ್ಸ್ ನಲ್ಲಿ ಅಜಯ್ (65 ರನ್) ಮತ್ತು ನಾಯಕ ವಿಕ್ರಾಂತ್ (50 ರನ್) ಅಮೋಘ ಜೊತೆಯಾಟವಾಡಿ ತಂಡಕ್ಕೆ ವಿರೋಚಿತ ಗೆಲುವು ತಂದಿತ್ತರು. ಈ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ ಚೆನ್ನೈ ನಾಯಕ ವಿಕ್ರಾಂತ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಫೈನಲ್ ಗೆ ಲಗ್ಗೆ
ಕರ್ನಾಟಕ ಬುಲ್ಡೋಜರ್ಸ್ ತಂಡದ ವಿರುದ್ಧ ಗೆಲುವಿನೊಂದಿಗೆ ಚೆನ್ನೈ ರೈನೋಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದ್ದು ಫೈನಲ್ ನಲ್ಲಿ ಪಂಜಾಬ್ ತಂಡದೊಂದಿಗೆ ಪ್ರಶಸ್ತಿಗಾಗಿ ಸೆಣಸಲಿದೆ. ನಾಳೆ ಇದೇ ಮೈಸೂರಿನ ಕೆಎಸ್ ಸಿಎ ಮೈದಾನದಲ್ಲಿ ಪಂಜಾಬ್ ಮತ್ತು ಚೆನ್ನೈ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



