Champions Trophy 2025: ವಿರಾಟ್ Kohli ಭರ್ಜರಿ ಅರ್ಧಶತಕ, ಮತ್ತೊಂದು Sachin Tendulkar ದಾಖಲೆ ಧೂಳಿಪಟ
ಕೊಹ್ಲಿ 98 ಎಸೆತಗಳಲ್ಲಿ 5 ಬೌಂಡರಿ ಸಹಿತ 84 ರನ್ ಕಲೆಹಾಕಿದರು. ಅಂತೆಯೇ ಇಂದು ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನದ 74ನೇ ಅರ್ಧಶತಕ ಸಿಡಿಸಿದರು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ನಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಮತ್ತೊಂದು ಅರ್ಧಶತಕದ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆ ಹಿಂದಿಕ್ಕಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿರುವ 265 ರನ್ ಗಳ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ನೆರವಾದರು. ಕೊಹ್ಲಿ 98 ಎಸೆತಗಳಲ್ಲಿ 5 ಬೌಂಡರಿ ಸಹಿತ 84 ರನ್ ಕಲೆಹಾಕಿದರು. ಅಂತೆಯೇ ಇಂದು ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನದ 74ನೇ ಅರ್ಧಶತಕ ಸಿಡಿಸಿದರು.
ಐಸಿಸಿ ಟೂರ್ನಿಯಲ್ಲಿ ದಾಖಲೆ
ಇದೇ ವೇಳೆ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದು, ಕೊಹ್ಲಿ ಇದೀಗ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ ಅರ್ಧಶತಕ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಭಾರತದ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಐಸಿಸಿ ಟೂರ್ನಿಗಳಲ್ಲಿ ಸಚಿನ್ ಒಟ್ಟು 23 ಅರ್ಧಶತಕ ಸಿಡಿಸಿದ್ದರು. ಇದೀಗ 24 ಅರ್ಧಶತಕಗಳೊಂದಿಗೆ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಈ ಪಟ್ಟಿಯಲ್ಲಿ 18 ಅರ್ಧಶತಕಗಳೊಂದಿಗೆ ರೋಹಿತ್ ಶರ್ಮಾ 3, 17 ಅರ್ಧಶತಕ ಸಿಡಿಸಿರುವ ಕುಮಾರ ಸಂಗಕ್ಕಾರ 4 ಮತ್ತು ಆಸ್ಟ್ರೇಲಿಯಾದ ರಿಕ್ಕಿಪಾಂಟಿಂಗ್ 16 ಅರ್ಧಶತಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ. ಅಂತೆಯೇ ಕೊಹ್ಲಿ ಐಸಿಸಿ ಟೂರ್ನಿಗಳಲ್ಲಿ ವೇಗವಾಗಿ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದು ಕೊಹ್ಲಿ ಕೇವಲ 53 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
Most 50-plus scores in ICC ODI tournaments
24 - Virat Kohli (53 innings)
23 - Sachin Tendulkar (58 innings)
18 - Rohit Sharma (42 innings)
17 - Kumar Sangakkara (56 innings)
16 - Ricky Ponting (60 innings)
ಚೇಸಿಂಗ್ ನಲ್ಲೇ ಅತೀ ಹೆಚ್ಚು ಅರ್ಧಶತಕ
ಇನ್ನು ಇದೇ ವೇಳೆ ವಿರಾಟ್ ಕೊಹ್ಲಿ ರನ್ ಚೇಸಿಂಗ್ ವೇಳೆ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ಕೀರ್ತಿಗೂ ಭಾಜನರಾಗಿದ್ದು, ಒಟ್ಟಾರೆ ಚೇಸಿಂಗ್ ವೇಳೆ ಬಂದ 41 ಅರ್ಧಶತಕ ಇದಾಗಿದ್ದು, ಅಂತೆಯೇ ಚೇಸಿಂಗ್ ವೇಳೆ ಕೊಹ್ಲಿ 28 ಶತಕ ಸಿಡಿಸಿದ್ದಾರೆ.
Fifty up for Virat Kohli. His 41st while chasing in an ODI game. He has 28 hundreds while chasing
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



