'ನಿಮಗೆ ಸ್ಲಿಮ್ ಹುಡುಗರೇ ಬೇಕಾದರೆ...': ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿ
ಮಂಗಳವಾರ ನಡೆಯಲಿರುವ ನಿರ್ಣಾಯಕ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಶಮಾ ಅವರ ಹೇಳಿಕೆಗಳಿಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕುರಿತು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಮಾಡಿರುವ 'ಕೊಬ್ಬು' ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಆಟಗಾರ ಸುನೀಲ್ ಗವಾಸ್ಕರ್ ಬಾಡಿ ಶೇಮಿಂಗ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, 'ಕ್ರೀಡಾಪಟುವಾಗಿ ರೋಹಿತ್ ಶರ್ಮಾ ಅವರ ದೇಹತೂಕ ಹೆಚ್ಚಾಗಿದೆ. ಅವರು ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ!' ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಅವರು ಪೋಸ್ಟ್ ಅನ್ನು ಅಳಿಸಿದ್ದರು.
ಕ್ರಿಕೆಟ್‌ಗೆ ಮಾನಸಿಕ ಶಕ್ತಿ ಹೆಚ್ಚು ಮುಖ್ಯವಾಗಿರುತ್ತದೆ ಮತ್ತು ಆಟಗಾರನ ದೈಹಿಕ ರೂಪಕ್ಕೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಫಿಟ್ನೆಸ್ ಆಯ್ಕೆಯ ಮೊದಲ ಮಾನದಂಡವಾಗಿದ್ದರೆ, ತಂಡದಲ್ಲಿ ಮಾಡೆಲ್‌ಗಳನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
'ನಾನು ಯಾವಾಗಲೂ ಅದನ್ನೇ ಹೇಳಿದ್ದೇನೆ, ನಿಮಗೆ ಸ್ಲಿಮ್ ಹುಡುಗರೇ ಬೇಕಾದರೆ, ನೀವು ಮಾಡೆಲಿಂಗ್ ಸ್ಪರ್ಧೆಗೆ ಹೋಗಿ. ಅಲ್ಲಿರುವ ಎಲ್ಲ ಮಾಡೆಲ್‌ಗಳನ್ನು ಆರಿಸಿಕೊಳ್ಳಿ. ಆದರೆ, ಇದು ಆ ರೀತಿಯ ಆಯ್ಕೆಯಲ್ಲ' ಎಂದು ಗವಾಸ್ಕರ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.
'ನೀವು ಎಷ್ಟು ಚೆನ್ನಾಗಿ ಕ್ರಿಕೆಟ್ ಆಡುತ್ತೀರಿ ಎಂಬುದಾಗಿದೆ. ನಾವು ಸರ್ಫರಾಜ್ ಖಾನ್ ಬಗ್ಗೆ ಮಾತನಾಡಿದ್ದೇವೆ. ಅವರನ್ನು ಕೂಡ ದೇಹದ ತೂಕದ ಬಗ್ಗೆ ಬಹಳ ಸಮಯದಿಂದ ನಿಂದಿಸಲಾಯಿತು. ಆದರೆ, ಅವರು ಟೆಸ್ಟ್ ಪಂದ್ಯದಲ್ಲಿ ಭಾರತಕ್ಕಾಗಿ 150 ರನ್ ಗಳಿಸಿದರೆ ಮತ್ತು ಇನ್ನೂ ಎರಡು ಅಥವಾ ಮೂರು ಪಂದ್ಯಗಳಲ್ಲಿ ಐವತ್ತು ಪ್ಲಸ್ ರನ್ ಗಳಿಸಿದರೆ, ಸಮಸ್ಯೆ ಏನು? ದೇಹದ ಗಾತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ಆಟಗಾರನ ಮಾನಸಿಕ ಶಕ್ತಿಗೆ ಸಂಬಂಧಿಸಿದ್ದಾಗಿದೆ. ಚೆನ್ನಾಗಿ ಬ್ಯಾಟ್ ಮಾಡಿ, ದೀರ್ಘಕಾಲ ಬ್ಯಾಟ್ ಮಾಡಿ ಮತ್ತು ರನ್ ಗಳಿಸುವುದು ಮುಖ್ಯವಾಗಿದೆ' ಎಂದು ತಿಳಿಸಿದರು.
ಮತ್ತೊಂದು ಪೋಸ್ಟ್‌ನಲ್ಲಿ ಶಮಾ, 'ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಕಪಿಲ್ ದೇವ್, ರವಿಶಾಸ್ತ್ರಿ ಮತ್ತು ಉಳಿದ ನಾಯಕರಿಗೆ ಹೋಲಿಸಿದರೆ ರೋಹಿತ್ ಶರ್ಮಾ ಅವರಲ್ಲಿ ಇರುವ ವಿಶೇಷ ಗುಣ ಯಾವುದು? ಎಂದು ಪ್ರಶ್ನಿಸಿದ್ದರು. ಇದು ಬಿಜೆಪಿ ನಾಯಕರು ಸೇರಿದಂತೆ ಎಲ್ಲೆಡೆ ಟೀಕೆಗೆ ಗುರಿಯಾಗಿತ್ತು.
ಮಂಗಳವಾರ ನಡೆಯಲಿರುವ ನಿರ್ಣಾಯಕ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಶಮಾ ಅವರ ಹೇಳಿಕೆಗಳಿಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದೆ.
'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರೆಯಾದ ಡಾ. ಶಮಾ ಮೊಹಮ್ಮದ್ ಅವರು ಕ್ರಿಕೆಟ್ ದಂತಕಥೆಯ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಈ ಪೋಸ್ಟ್‌ಗಳನ್ನು ಅಳಿಸುವಂತೆ ಅವರಿಗೆ ಸೂಚಿಸಲಾಗಿದ್ದು, ಭವಿಷ್ಯದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ' ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



