IPL ಪಂದ್ಯಾವಳಿ ವೇಳೆ ತಂಬಾಕು, ಮದ್ಯದ ಜಾಹೀರಾತುಗಳಿಗೆ ಕೇಂದ್ರ ಸರ್ಕಾರ ನಿಷೇಧ!
ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಅವರಿಗೆ ಪತ್ರ ಬರೆದಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ (DGHS)ಪ್ರೊ. ಡಾ. ಅತುಲ್ ಗೋಯೆಲ್, ಇದು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ ತಮ್ಮ “ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆ ಎಂದು ಹೇಳಿದ್ದಾರೆ.

ನವದೆಹಲಿ: ಐಪಿಎಲ್ 2025 ಉದ್ಘಾಟನೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಕ್ರೀಡಾಂಗಣದ ಆವರಣದಲ್ಲಿ ಮತ್ತು ಪ್ರಸಾರದ ಸಮಯದಲ್ಲಿ ಬಾಡಿಗೆ ಜಾಹೀರಾತು ಸೇರಿದಂತೆ ಎಲ್ಲಾ ರೀತಿಯ ತಂಬಾಕು ಮತ್ತು ಮದ್ಯ ಪ್ರಚಾರಗಳನ್ನು ನಿಷೇಧಿಸಲು ಐಪಿಎಲ್ ಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಅವರಿಗೆ ಪತ್ರ ಬರೆದಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ (DGHS)ಪ್ರೊ. ಡಾ. ಅತುಲ್ ಗೋಯೆಲ್, ಇದು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ ತಮ್ಮ “ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆ ಎಂದು ಹೇಳಿದ್ದಾರೆ.
ಮಾರ್ಚ್ 22 ರಿಂದ ಪ್ರಾರಂಭವಾಗುವ ಪಂದ್ಯಾವಳಿಯಲ್ಲಿ ಮತ್ತು ಪ್ರಸಾರವಾಗುವ ವಾಹಿನಿಯಲ್ಿ ಇಂತಹ ಜಾಹೀರಾತುಗಳನ್ನು ಪ್ರಸಾರ ಮಾಡಬಾರದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಕ್ರಿಕೆಟ್ ಆಟಗಾರರು ಯುವಕರಿಗೆ ಮಾದರಿಯಾಗಿದ್ದು, ಆರೋಗ್ಯಕರ, ಸಕ್ರಿಯ ಜೀವನಶೈಲಿಯನ್ನು ಉತ್ತೇಜಿಸಬೇಕು. ಐಪಿಎಲ್ ದೇಶದ ಅತಿದೊಡ್ಡ ಟೂರ್ನಿಯಾಗಿದ್ದು, ಸರ್ಕಾರದ ಆದೇಶವು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸಲು ಮತ್ತು ಸರ್ಕಾರದ ಆರೋಗ್ಯ ಉಪಕ್ರಮಗಳನ್ನು ಬೆಂಬಲಿಸಲು ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆಯನ್ನು ಹೊಂದಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರಿಗೂ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
"ಐಪಿಎಲ್ ಆಟಗಳು ಮತ್ತು ಸಂಬಂಧಿತ ಐಪಿಎಲ್ ಪಂದ್ಯಗಳು ನಡೆಯುವ ಕ್ರೀಡಾಂಗಣದ ಆವರಣ ಹಾಗೂ ಪ್ರಸಾರವಾಗುವ ಚಾನೆಲ್ ಗಳಲ್ಲಿ ಎಲ್ಲಾ ರೀತಿಯ ತಂಬಾಕು, ಮದ್ಯದ ಜಾಹೀರಾತುಗಳನ್ನು ನಿಷೇಧಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಟೂರ್ನಿಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳು ಮತ್ತು ಕ್ರೀಡಾ ಸೌಲಭ್ಯಗಳಲ್ಲಿ ತಂಬಾಕು, ಮದ್ಯ ಉತ್ಪನ್ನಗಳ ಮಾರಾಟದ ಮೇಲಿನ ನಿಷೇಧವನ್ನು ಜಾರಿಗೆ ತರುವಂತೆ ಪತ್ರದಲ್ಲಿ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



