IPL 2025: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು; ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ಗೆ BCCI ಶಿಕ್ಷೆ!
ಚೆನ್ನೈ ನೀಡಿದ 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ಗಳಲ್ಲಿಯೇ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿ 4 ವಿಕೆಟ್ಗಳ ಜಯ ಸಾಧಿಸಿತು.
ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ (PBKS) ತಂಡದ ನಾಯಕ ಶ್ರೇಯಸ್ ಅಯ್ಯರ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶಿಕ್ಷೆ ವಿಧಿಸಿದೆ.
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.2 ಓವರ್ಗಳಲ್ಲಿಯೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 190 ರನ್ ಗಳಿಸಿತು. ಚೆನ್ನೈ ನೀಡಿದ 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ಗಳಲ್ಲಿಯೇ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿ 4 ವಿಕೆಟ್ಗಳ ಜಯ ಸಾಧಿಸಿತು.
ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ನಿಗದಿತ ಸಮಯದೊಳಗೆ ಓವರ್ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಶಿಕ್ಷೆ ವಿಧಿಸಲಾಗಿದೆ. 19ನೇ ಓವರ್ ಪ್ರಾರಂಭವಾಗುವ ಮೊದಲು ಪಿಬಿಕೆಎಸ್ ಹೆಚ್ಚುವರಿ ಫೀಲ್ಡರ್ ಅನ್ನು ವೃತ್ತದೊಳಗೆ ತರಬೇಕಾಯಿತು. ಆದರೂ, ಯುಜ್ವೇಂದ್ರ ಚಾಹಲ್ ಅವರ ಹ್ಯಾಟ್ರಿಕ್ ವಿಕೆಟ್ ಗಳಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ.
'ಬುಧವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 49ನೇ ಪಂದ್ಯದ ವೇಳೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
'ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅಡಿಯಲ್ಲಿ (ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದ) ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಅಯ್ಯರ್ ಅವರಿಗೆ 12 ಲಕ್ಷ ದಂಡ ವಿಧಿಸಲಾಗಿದೆ' ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಪಂದ್ಯದಲ್ಲಿ ಯುಜ್ವೇಂದ್ರ ಚಾಹಲ್ ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಗೆಲುವಿಗೆ ನೆರವಾದರು. ನಾಯಕ ಶ್ರೇಯಸ್ ಅಯ್ಯರ್ ಕೂಡ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು. ಕೊನೆಗೆ ಪಂಜಾಬ್ ತಂಡ ನಾಲ್ಕು ವಿಕೆಟ್ಗಳ ಜಯ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


