ಕ್ರಿಕೆಟ್

IPL 2025: ವೈಭವ್ ಸೂರ್ಯವಂಶಿ ಶೂನ್ಯಕ್ಕೆ ಔಟ್; ರೋಹಿತ್ ಶರ್ಮಾ ನಡೆಗೆ ನೆಟ್ಟಿಗರ ಮೆಚ್ಚುಗೆ!

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು.

IPL 2025: ವೈಭವ್ ಸೂರ್ಯವಂಶಿ ಶೂನ್ಯಕ್ಕೆ ಔಟ್; ರೋಹಿತ್ ಶರ್ಮಾ ನಡೆಗೆ ನೆಟ್ಟಿಗರ ಮೆಚ್ಚುಗೆ!
ರೋಹಿತ್ ಶರ್ಮಾ
Published On :

ಗುರುವಾರ ಜೈಪುರದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧ 100 ರನ್‌ಗಳ ಭಾರಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದ್ದ ರಾಜಸ್ಥಾನ ರಾಯಲ್ಸ್ ಮುಂಬೈ ವಿರುದ್ಧ 100 ರನ್ ಅಂತರದ ಹೀನಾಯ ಸೋಲು ಕಂಡಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದ ವೈಭವ್ ಸೂರ್ಯವಂಶಿ ಮುಂಬೈ ಇಂಡಿಯನ್ಸ್ ವಿರುದ್ಧ ಸೊನ್ನೆಗೆ ಔಟಾದರು.

ಹಿಂದಿನ ಪಂದ್ಯದಲ್ಲಿ ಐಪಿಎಲ್‌ನಲ್ಲಿ ಅತ್ಯಂತ ವೇಗವಾಗಿ ಶತಕ ಬಾರಿಸಿದ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ, ವೈಭವ್ ತನ್ನ ಖಾತೆಯನ್ನು ತೆರೆಯಲು ವಿಫಲರಾದರು. ಶೂನ್ಯಕ್ಕೆ ನಿರ್ಗಮಿಸಿದ ವೈಭವ್ ಅವರೊಂದಿಗೆ ಮುಂಬೈ ಇಂಡಿಯನ್ಸ್ ಬ್ಯಾಟರ್ ರೋಹಿತ್ ಶರ್ಮಾ ನಡೆದುಕೊಂಡ ರೀತಿ ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ.

ಮುಂಬೈ ವಿರುದ್ಧದ ಸೋಲು ಕಂಡಿರುವ ರಾಜಸ್ಥಾನ್ ರಾಯಲ್ಸ್ ಅಧಿಕೃತವಾಗಿ ಐಪಿಎಲ್ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದೆ. ಪಂದ್ಯದ ನಂತರ ಎರಡು ತಂಡಗಳು ಹ್ಯಾಂಡ್‌ಶೇಕ್‌ಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಂತೆ, ರೋಹಿತ್ ಶರ್ಮಾ ಅವರು ವೈಭವ್‌ ಬಳಿಗೆ ತೆರಳಿದರು ಮತ್ತು ಯುವ ಆಟಗಾರನೊಂದಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.

'ಅವರು ಕಲಿಯುತ್ತಾರೆ. ಅಲ್ಲಿ ರೋಹಿತ್ ಶರ್ಮಾ ಅವರ ಪ್ರೋತ್ಸಾಹದ ಮಾತುಗಳು' ಎಂದು ರವಿಶಾಸ್ತ್ರಿ ಲೈವ್‌ನಲ್ಲಿಯೇ ಹೇಳಿದರು.

ರಾಯಲ್ಸ್ ವಿರುದ್ಧ 38 ಎಸೆತಗಳಲ್ಲಿ 63 ರನ್ ಗಳಿಸಿದ ಆರಂಭಿಕ ಆಟಗಾರ ರಿಯಾನ್ ರಿಕಲ್ಟನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 217 ರನ್ ಕಲೆಹಾಕಿತು. ಮುಂಬೈ ನೀಡಿದ 218 ರನ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಬೌಲರ್‌ಗಳ ಎದುರು ಮಂಡಿಯೂರಿತು. ಅಂತಿಮವಾಗಿ 16.1 ಓವರ್‌ಗಳಲ್ಲಿ 117 ರನ್ ಗಳಿಸಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.