IPL 2025: RCBಗೆ ಮತ್ತೊಬ್ಬ ಗೇಯ್ಲ್; ಒಂದೇ ಓವರ್ನಲ್ಲಿ 6,6,4,6,7nb,4; ಶೆಫರ್ಡ್ ಅಬ್ಬರದ ಬ್ಯಾಟಿಂಗ್, ದಾಖಲೆಗಳು ಉಡೀಸ್, Video!
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಥೆಲ್ ಮತ್ತು ಕೊಹ್ಲಿ ಭರ್ಜರಿ ಆರಂಭ ನೀಡಿದ್ದರು. ಇನ್ನು ಕೊನೆಯ ಓವರ್ಗಳಲ್ಲಿ ಶೆಫರ್ಡ್ 19 ಮತ್ತು 20ನೇ ಓವರ್ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಗಳಿಸಿದರು.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 213 ರನ್ ಕಲೆಹಾಕಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಥೆಲ್ ಮತ್ತು ಕೊಹ್ಲಿ ಭರ್ಜರಿ ಆರಂಭ ನೀಡಿದ್ದರು. ಇನ್ನು ಕೊನೆಯ ಓವರ್ಗಳಲ್ಲಿ ಶೆಫರ್ಡ್ 19 ಮತ್ತು 20ನೇ ಓವರ್ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಗಳಿಸಿದರು.
ರೊಮಾರಿಯೊ ಶೆಫರ್ಡ್ ಕೊನೆಯ ಎರಡು ಓವರ್ಗಳಲ್ಲಿ ವಿನಾಶಕಾರಿ ಆಟವಾಡಿದರು. ಅವರು ಕೇವಲ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅತಿ ವೇಗದ ಬ್ಯಾಟರ್ ಎಂಬ ದಾಖಲೆಗೆ ಪಾತ್ರರಾದರು. ಈ ವಿಷಯದಲ್ಲಿ ಅವರು ಪ್ಯಾಟ್ ಕಮ್ಮಿನ್ಸ್ ಮತ್ತು ಕೆಎಲ್ ರಾಹುಲ್ ಅವರನ್ನು ಸರಿಗಟ್ಟಿದರು. ಅದೇ ಸಮಯದಲ್ಲಿ, ಅತ್ಯಂತ ವೇಗದ ಅರ್ಧಶತಕ ಗಳಿಸಿದ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ 13 ಎಸೆತಗಳಲ್ಲಿ ಈ ಸಾಧನೆ ಮಾಡಿ ಅಗ್ರಸ್ಥಾನದಲ್ಲಿದ್ದಾರೆ.
ರೊಮಾರಿಯೊ ಶೆಫರ್ಡ್ 19ನೇ ಓವರ್ ನಲ್ಲಿ 6,6,4,6,7nb,4 ರನ್ ಸಿಡಿಸಿದ್ದರೆ, 20ನೇ ಓವರ್ ನಲ್ಲಿ 4,4,6,6 ರನ್ ಪೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



