IPL 2025: ಮ್ಯಾಕ್ಸ್‌ವೆಲ್ ಬದಲಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಕರೆತಂದ ಪಂಜಾಬ್ ಕಿಂಗ್ಸ್!
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು.

ಮುಲ್ಲನ್‌ಪುರ: ಗಾಯದಿಂದಾಗಿ ಐಪಿಎಲ್ 2025ನೇ ಆವೃತ್ತಿಯ ಉಳಿದ ಪಂದ್ಯಗಳಿಂದ ಹೊರಗುಳಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವು ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಮತ್ತೋರ್ವ ಆಸ್ಟ್ರೇಲಿಯಾದ ಆಲ್‌ರೌಂಡರ್ ಅನ್ನು ಕರೆತಂದಿದೆ.
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು. ಟೂರ್ನಿಯ ಆರಂಭದಿಂದಲೂ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ, ಆಡಿರುವ ಏಳು ಪಂದ್ಯಗಳಲ್ಲಿ ಕೇವಲ 48 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬದಲಿಗೆ ಆಸ್ಟ್ರೇಲಿಯಾದವರೇ ಆದ ಆಲ್‌ರೌಂಡರ್ ಮಿಚ್ ಓವನ್ ಅವರನ್ನು ತಂಡಕ್ಕೆ ಕರೆತರಲಾಗಿದೆ.
'ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಉಳಿದ ಪಂದ್ಯಗಳಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವು ಆಲ್‌ರೌಂಡರ್ ಮಿಚ್ ಓವನ್ ಅವರನ್ನು ಆಯ್ಕೆ ಮಾಡಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
14 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಬಲಗೈ ಬ್ಯಾಟ್ಸ್‌ಮನ್ ಮತ್ತು ಬಲಗೈ ವೇಗಿಯಾಗಿರುವ 23 ವರ್ಷದ ಓವನ್, ಶ್ರೇಯಸ್ ಅಯ್ಯರ್ ನೇತೃತ್ವದ ಫ್ರಾಂಚೈಸಿಯನ್ನು ಮೂರು ಕೋಟಿ ರೂ.ಗೆ ಸೇರಲಿದ್ದಾರೆ.
ಆಸ್ಟ್ರೇಲಿಯಾದ ತಾಸ್ಮೇನಿಯಾದ ಮಿಚ್ ಓವನ್ 34 ಟಿ20 ಪಂದ್ಯಗಳನ್ನು ಆಡಿದ್ದು, 646 ರನ್ ಗಳಿಸಿದ್ದಾರೆ. ಎರಡು ಶತಕಗಳು ಮತ್ತು 108 ಗರಿಷ್ಠ ಸ್ಕೋರ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಟಿ20ಯಲ್ಲಿ 10 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



