ಕ್ರಿಕೆಟ್

IPL 2025: RCB ವಿರುದ್ಧ CSK ಸೋಲು; ಈ ಆವೃತ್ತಿಯಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ!

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

IPL 2025: RCB ವಿರುದ್ಧ CSK ಸೋಲು; ಈ ಆವೃತ್ತಿಯಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ!
ರವೀಂದ್ರ ಜಡೇಜಾ
Published On :

ಈಗಾಗಲೇ ಐಪಿಎಲ್ 2025 ಆವೃತ್ತಿಯ ಟೂರ್ನಿಯಿಂದ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮತ್ತೊಂದು ಆಘಾತಕಾರಿ ಸೋಲು ಕಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಸಿಎಸ್‌ಕೆ 214 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿತು.

ಯುವ ಆಟಗಾರ ಆಯುಷ್ ಮ್ಹಾತ್ರೆ (94) ಮತ್ತು ರವೀಂದ್ರ ಜಡೇಜಾ (77*) ಜೋಡಿಯ 114 ರನ್‌ಗಳ ಜೊತೆಯಾಟವು ತಂಡದ ಗೆಲುವಿಗೆ ಬಾರಲಿಲ್ಲ. ಆರ್‌ಸಿಬಿ ಸಿಎಸ್‌ಕೆಯನ್ನು 211/5ಕ್ಕೆ ಕಟ್ಟಿಕಾಕುವಲ್ಲಿ ಯಶಸ್ವಿಯಾಯಿತು. ಸೋತ ತಂಡದ ಭಾಗವಾಗಿದ್ದರೂ, ಆಲ್‌ರೌಂಡರ್ ರವೀಂದ್ರ ಜಡೇಜಾ ಈ ಆವೃತ್ತಿಯ ಅತಿ ಉದ್ದದ ಸಿಕ್ಸ್ ಬಾರಿಸಿ ದಾಖಲೆ ಬರೆದಿದ್ದಾರೆ.

ಸಿಎಸ್‌ಕೆ ತಂಡದ ಚೇಸಿಂಗ್‌ನ 17 ನೇ ಓವರ್‌ನಲ್ಲಿ, ಜಡೇಜಾ ಅವರು ಲುಂಗಿ ಎನ್‌ಗಿಡಿ ಅವರ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್‌ನ ಅಂತರ 109 ಮೀ ಆಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 107 ಮೀ ಸಿಕ್ಸರ್ ಬಾರಿಸಿದ್ದ ಸನ್‌ರೈಸರ್ಸ್ ಹೈದರಾಬಾದ್ ವಿಕೆಟ್ ಕೀಪರ್-ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರು ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

ಈ 214 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ 5 ವಿಕೆಟ್‌ ನಷ್ಟಕ್ಕೆ 211 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಎರಡು ರನ್‌ಗಳ ಸೋಲು ಕಂಡಿತು. ಆರ್‌ಸಿಬಿ ಪರ ಚೊಚ್ಚಲ ಪಂದ್ಯವಾಡಿದ ಲುಂಗಿ ಎನ್‌ಗಿಡಿ 30 ರನ್ ನೀಡಿ 3 ವಿಕೆಟ್ ಕಬಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.