ಮೇ 11 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯ ಅಹಮದಾಬಾದ್ ಗೆ ಶಿಫ್ಟ್
ಆಪರೇಷನ್ ಸಿಂಧೂರ ನಂತರ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಅಹಮದಾಬಾದ್: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಧರ್ಮಶಾಲಾ ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳ ಬಂದ್ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಮೇ 11 ರಂದು ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ ಐಪಿಎಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಪಟೇಲ್ ಅವರು ತಿಳಿಸಿದ್ದಾರೆ.
ಇದುವರೆಗೆ 11 ಪಂದ್ಯಗಳಿಂದ 13 ಅಂಕಗಳೊಂದಿಗೆ, ಡೆಲ್ಲಿ ಕ್ಯಾಪಿಟಲ್ಸ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಆಪರೇಷನ್ ಸಿಂಧೂರ ನಂತರ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



