ಕ್ರಿಕೆಟ್

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!

ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!
ಪಂಜಾಬ್ ಕಿಂಗ್ಸ್‌ನ ಪ್ರಿಯಾಂಶ್ ಆರ್ಯ, ಪ್ರಭುಸಿಮ್ರಾನ್ ಸಿಂಗ್ ಆಡುತ್ತಿದ್ದರು.
Published On :

ನವದೆಹಲಿ: ಭಾರತದ 'ಆಪರೇಷನ್ ಸಿಂಧೂರ' ಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಗುರುವಾರ ರಾತ್ರಿ ಭಾರತದ ಹಲವೆಡೆ ಕ್ಷಿಪಣಿ, ಡ್ರೋನ್ ಹಾಗೂ ಗುಂಡಿನ ದಾಳಿ ನಡೆಸಿದೆ.

ರಾಜಸ್ಥಾನದ ಜೈಸಲ್ಮಾರ್ ವಾಯುನೆಲೆ ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ದಾಳಿಗೆ ಯತ್ನಿಸಿದೆ. ಆದರೆ, ಜೈಸಲ್ಮಾರ್ ನಲ್ಲಿನ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯಿಂದ ಪಾಕ್ ಡ್ರೋನ್ ಗಳನ್ನು ಹೊಡೆದುರುಳಿಸಲಾಗಿದೆ.

ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.

ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಸೆಕ್ಟರ್‌ನಲ್ಲಿ ಪಾಕಿಸ್ತಾನ ಉಡಾಯಿಸಿದ 8 ಕ್ಷಿಪಣಿಗಳನ್ನು ಭಾರತೀಯ ವಾಯು ರಕ್ಷಣಾ ಘಟಕಗಳು ತಡೆದಿವೆ ಎಂದು ಮೂಲಗಳು ತಿಳಿಸಿವೆ.

IPL ಪಂದ್ಯ ಸ್ಥಗಿತ: ಪಾಕಿಸ್ತಾನ ದಾಳಿ ನಡುವೆ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಡೇಡಿಯಂನಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ VS ಡೆಲ್ಲಿ ಕ್ಯಾಪಿಟಲ್ಸ್ ನಡುವಿನ IPL ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಂಜಾಬ್ ಕಿಂಗ್ಸ್ 10.1 ಓವರ್‌ಗಳ ಲ್ಲಿ 122 ರನ್‌ಗಳನ್ನು ಹಾಕಿತು ಆಗ ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಯಿತು. ಆದರೆ, ಭದ್ರತಾ ಕಾರಣಗಳಿಗಾಗಿ ಅಭಿಮಾನಿಗಳನ್ನು ಕ್ರೀಡಾಂಗಣದಿಂದ ಹೊರಹೋಗುವಂತೆ ಸೂಚಿಸಲಾಯಿತು. ಇದರಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಗಳಿಂದಾಗಿ, ಹಿಮಾಚಲ ಪ್ರದೇಶದಲ್ಲಿ ಬ್ಲಾಕ್ ಔಟ್ ಘೋಷಿಸಲಾಗಿದ್ದು, ಇದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ESPN Cricinfo ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.