ಕ್ರಿಕೆಟ್

2027 ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಡುವುದಿಲ್ಲ: ಸುನೀಲ್ ಗವಾಸ್ಕರ್

ವಿರಾಟ್ ಕೊಹ್ಲಿ 2027ರ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದರು ಮತ್ತು ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಮುನ್ನಡೆಸಲು ಬಯಸಿದ್ದರು.

2027 ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಡುವುದಿಲ್ಲ: ಸುನೀಲ್ ಗವಾಸ್ಕರ್
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
Published On :

ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಪರ ತಂಡದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿತ್ತು. ಆದರೆ, ಸರಣಿ ಪ್ರಾರಂಭವಾಗುವ ಮೊದಲೇ ಈ ಮಾದರಿಯಿಂದ ನಿವೃತ್ತಿಯಾಗುವ ನಿರ್ಧಾರ ಎಲ್ಲರನ್ನೂ ದಿಗ್ಭ್ರಮೆಗೊಳಿಸಿತು. ಈ ಜೋಡಿ ಈಗಾಗಲೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ್ದು, ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಭಾರತದ ಪರ ಆಡಲಿದ್ದಾರೆ.

ವಿರಾಟ್ ಕೊಹ್ಲಿ 2027ರ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದರು ಮತ್ತು ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಮುನ್ನಡೆಸಲು ಬಯಸಿದ್ದರು. ಈ ವಿಚಾರವಾಗಿ ಭಾರತೀಯ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದು, 2027ರ ವಿಶ್ವಕಪ್ ಆಡುವುದು ರೋಹಿತ್ ಮತ್ತು ವಿರಾಟ್‌ಗೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದಿದ್ದಾರೆ.

ಸ್ಪೋರ್ಟ್ಸ್ ಟುಡೇನಲ್ಲಿ ನಡೆದ ಸಂಭಾಷಣೆಯಲ್ಲಿ ಮಾತನಾಡಿದ ಗವಾಸ್ಕರ್, ಈ ಜೋಡಿಯು 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ನಿರ್ಧಾರವು ಆಯ್ಕೆದಾರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದರ ಮೇಲೆ ಹೆಚ್ಚಾಗಿ ಅವಲಂಬಿಸಿದೆ ಎಂದು ಹೇಳಿದರು.

'ಕೊಹ್ಲಿ ಮತ್ತು ರೋಹಿತ್ ಇಬ್ಬರೂ 50-ಓವರ್‌ಗಳ ಸ್ವರೂಪದಲ್ಲಿ 'ಅದ್ಭುತ ಪ್ರದರ್ಶನ' ನೀಡಿದ್ದಾರೆ. 2027ರ ವೇಳೆಗೆ ಇಬ್ಬರೂ ಆಟಗಾರರು ಇದೇ ರೀತಿಯ ಪ್ರದರ್ಶನವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದನ್ನು ಆಯ್ಕೆ ಸಮಿತಿಯು ಸೂಕ್ಷ್ಮವಾಗಿ ಪರಿಗಣಿಸುತ್ತದೆ. 2027ರ ವಿಶ್ವಕಪ್ ಬಂದಾಗ ಕೊಹ್ಲಿ ಮತ್ತು ರೋಹಿತ್ ಅವರಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡಬಲ್ಲರು ಎಂಬುದನ್ನು ಆಯ್ಕೆ ಸಮಿತಿಯು ನಂಬುತ್ತದೆಯೇ ಎಂಬುದರ ಮೇಲೆ ಅವರ ನಿರ್ಧಾರ ಅವಲಂಬಿತವಾಗಿರುತ್ತದೆ. ಇಬ್ಬರೂ ಉತ್ತಮ ಪ್ರದರ್ಶನ ನೀಡಬಹುದು ಎಂದು ಆಯ್ಕೆ ಸಮಿತಿಗೆ ನಂಬಿಕೆ ಬಂದರೆ, ಅವರನ್ನು 2027ರ ವಿಶ್ವಕಪ್‌ಗೆ ಆಯ್ಕೆ ಮಾಡುವ ಸಾಧ್ಯತೆಯಿದೆ' ಎಂದು ತಿಳಿಸಿದರು.

ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಕೇಳಿದಾಗ, 2027ರ ವಿಶ್ವಕಪ್‌‌ನಲ್ಲಿ ವಿರಾಟ್ ಅಥವಾ ರೋಹಿತ್ ಇಬ್ಬರೂ ಇರುವುದಿಲ್ಲ ಎಂದರು.

'ಇಲ್ಲ, ಅವರು ಆಡುತ್ತಾರೆಂದು ನಾನು ಭಾವಿಸುವುದಿಲ್ಲ. ನಾನು ತುಂಬಾ ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ. ಆದರೆ, ಯಾರಿಗೆ ಗೊತ್ತು, ಮುಂದಿನ ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ, ಅವರು ಉತ್ತಮ ಫಾರ್ಮ್‌ನಲ್ಲಿದ್ದರೆ ಮತ್ತು ಅವರು ಶತಕಗಳನ್ನು ಗಳಿಸುತ್ತಲೇ ಇದ್ದರೆ, ದೇವರು ಕೂಡ ಅವರನ್ನು ಕೈಬಿಡಲು ಸಾಧ್ಯವಿಲ್ಲ' ಎಂದು ಗವಾಸ್ಕರ್ ಒತ್ತಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.