IPL 2025: ಬದಲಿ ಆಟಗಾರರ ಸೇರ್ಪಡೆ ನಿಯಮ ಸಡಿಲಿಕೆ; ಫ್ರಾಂಚೈಸಿಗಳಿಗೆ BCCI ಬಿಗ್ ರಿಲೀಫ್!
ಈಗ ಸ್ಥಾನ ಪಡೆದ ಆಟಗಾರರು ಮುಂದಿನ ಆವೃತ್ತಿಯ ಟೂರ್ನಿಗೆ ಮುಂದುವರೆಯುವುದಿಲ್ಲ ಎಂದು ಸ್ಪಷ್ಪಪಡಿಸಲಾಗಿದೆ.

ನವದೆಹಲಿ: ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ ಭಾಗದಲ್ಲಿ ಬದಲೀ ಆಟಗಾರರನ್ನು ಸೇರ್ಪಡೆ ಮಾಡಿಕೊಳ್ಳುವ ನಿಯಮವನ್ನು ಸಡಿಲಿಸಲಾಗಿದೆ. ಈ ಹಂತದಲ್ಲಿ ಬದಲಿ ಆಟಗಾರರನ್ನು ಸೇರ್ಪಡೆ ಮಾಡಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ನೀಡಲಾಗಿದೆ.
ಆದರೆ ಈ ನಿಯಮ ತಾತ್ಕಾಲಿಕವಾಗಿದೆ. ಈಗ ಸ್ಥಾನ ಪಡೆದ ಆಟಗಾರರು ಮುಂದಿನ ಆವೃತ್ತಿಯ ಟೂರ್ನಿಗೆ ಮುಂದುವರೆಯುವುದಿಲ್ಲ ಎಂದು ಸ್ಪಷ್ಪಪಡಿಸಲಾಗಿದೆ ಎಂದು ESPNcricinfo ತಿಳಿಸಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿಯಾಚೆಗಿನ ಉದ್ವಿಗ್ನತೆಯಿಂದಾಗಿ ಕಳೆದ ಶುಕ್ರವಾರ ಬಿಸಿಸಿಐ ಒಂದು ವಾರ IPL ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಈಗ ಮೇ 17ರಿಂದ ಪಂದ್ಯಗಳು ಪುನರಾರಂಭವಾಗಲಿವೆ.
ಆದರೆ, ತಮ್ಮ ದೇಶಗಳಿಗೆ ಮರಳಿದ ಕೆಲ ವಿದೇಶಿ ಆಟಗಾರರು ಮತ್ತೆ ಭಾರತಕ್ಕೆ ಮರಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬದಲಿ ಆಟಗಾರರ ಸೇರ್ಪಡೆ ನಿಯಮವನ್ನು ಸಡಿಲಿಕೆ ಮಾಡಲಾಗಿದೆ ಎನ್ನಲಾಗಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 17ರ ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿವೆ. ಜೂನ್ 3 ರಂದು ಫೈನಲ್ ಹಣಾಹಣಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



