ಕ್ರಿಕೆಟ್

IPL 2025: ತವರಿನಲ್ಲಿ DC ವಿರುದ್ಧ MI ಗೆಲುವು; 59 ರನ್ ಭರ್ಜರಿ ಜಯ

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: ತವರಿನಲ್ಲಿ DC ವಿರುದ್ಧ MI ಗೆಲುವು; 59 ರನ್ ಭರ್ಜರಿ ಜಯ
ಮುಂಬೈ ಇಂಡಿಯನ್ಸ್ ಆಟಗಾರರು
Published On :

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(MI) ಬುಧವಾರ ಡೆಲ್ಲಿ ಕ್ಯಾಪಿಟಲ್ಸ್(DC) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಪ್ಲೇಆಫ್‌ಗೆ ಹತ್ತಿರವಾಗಿದೆ.

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್, ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಅರ್ಧಶತಕ(73)ದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 180 ರನ್ ಕಲೆ ಹಾಕಿತು.

ಗೆಲುವಿಗೆ 181ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, 18.2 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 121 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿದೆ. ಇದರೊಂದಿಗೆ ಅಕ್ಷರ್ ಪಟೇಲ್ ನೇತೃತ್ವದ ತಂಡಕ್ಕೆ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವುದು ಕಷ್ಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.