ಕ್ರಿಕೆಟ್

IPL 2025: ಕ್ವಾಲಿಫೈಯರ್-1; ಟಾಸ್ ಗೆದ್ದು RCB ಬೌಲಿಂಗ್ ಆಯ್ಕೆ!

ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದ್ದಾರೆ.

IPL 2025: ಕ್ವಾಲಿಫೈಯರ್-1; ಟಾಸ್ ಗೆದ್ದು RCB ಬೌಲಿಂಗ್ ಆಯ್ಕೆ!
ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್
Published On :

ಮುಲ್ಲನಪುರ: ಚಂಡೀಗಢದ ಮುಲ್ಲನಪುರದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2025 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.

ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ವೇಗಿ ಜೋಶ್ ಹ್ಯಾಜಲ್‌ವುಡ್ ತಂಡಕ್ಕೆ ಮರಳಿದ್ದಾರೆ. ನುವಾನ್ ತುಷಾರ ಬದಲಿಗೆ ಪ್ಲೇಯಿಂಗ್ XIಗೆ ವಾಪಸ್ಸಾಗಿದ್ದಾರೆ. ಇಂದಿನ ಪಂದ್ಯದಲ್ಲಿ ರಜತ್ ಪಾಟಿದಾರ್ ಅವರೇ ನಾಯಕರಾಗಿದ್ದಾರೆ. ಕಳೆದ ಪಂದ್ಯದಲ್ಲಿ ಜಿತೇಶ್ ಶರ್ಮಾ ನಾಯಕರಾಗಿದ್ದರು.

ಪಂಜಾಬ್ ತಂಡದಲ್ಲಿಯೂ ಒಂದು ಬದಲಾವಣೆ ಮಾಡಲಾಗಿದೆ. ಮಾರ್ಕೊ ಜಾನ್ಸೆನ್ ಬದಲಿಗೆ ಅಜ್ಮತುಲ್ಲಾ ಒಮರ್ಜಾಯ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್) ಶ್ರೇಯಸ್ ಅಯ್ಯರ್(ನಾಯಕ) ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಅರ್ಶ್ದೀಪ್ ಸಿಂಗ್, ಕೈಲ್ ಜೇಮಿಸನ್.

ಇಂಪ್ಯಾಕ್ಟ್ ಆಟಗಾರರು: ವಿಜಯ್‌ಕುಮಾರ್ ವೈಶಾಕ್, ಪ್ರವೀಣ್ ದುಬೆ, ಸೂರ್ಯಾಂಶ್ ಶೆಡ್ಜ್, ಮುಶೀರ್ ಖಾನ್, ಕ್ಸೇವಿಯರ್ ಬಾರ್ಟ್‌ಲೆಟ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.