3ನೇ ಟಿ20: ಭಾರತಕ್ಕೆ ಗೆಲ್ಲಲು 187 ರನ್ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟಾಯ್ನಿಸ್ (64) ಅರ್ಧಶತಕ ಗಳಿಸಿ ಆಸಿಸ್ ನ ಬೃಹತ್ ಮೊತ್ತಕ್ಕೆ ಕಾರಣರಾದರು.

ಹೋಬಾರ್ಟ್: ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 187 ರನ್ ಗಳ ಬೃಹತ್ ಗುರಿ ನೀಡಿದೆ.
ಆಸ್ಟ್ರೇಲಿಯಾದ ಹೋಬಾರ್ಟ್ ನ ಬೆಲ್ಲೆರಿವ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 187 ರನ್ ಗಳ ಗುರಿ ನೀಡಿದೆ.
ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟಾಯ್ನಿಸ್ (64) ಅರ್ಧಶತಕ ಗಳಿಸಿ ಆಸಿಸ್ ನ ಬೃಹತ್ ಮೊತ್ತಕ್ಕೆ ಕಾರಣರಾದರು. ಅವರಿಗೆ ಅಂತಿಮ ಹಂತದಲ್ಲಿ ಮ್ಯಾಥ್ಯೂಶಾರ್ಟ್ (26) ಕೂಡ ಉತ್ತಮ ಸಾಥ್ ನೀಡಿದರು.
ಇನ್ನು ಭಾರತದ ಪರ ಅರ್ಶ್ ದೀಪ್ ಸಿಂಗ್ 3, ವರುಣ್ ಚಕ್ರವರ್ತಿ 2 ಮತ್ತು ಶಿವಂ ದುಬೆ 1 ವಿಕೆಟ್ ಪಡೆದರು.

India vs Australia, 3rd T20I: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ;ಸಂಜು ಸ್ಯಾಮ್ಸನ್ ಸೇರಿ ಮೂವರಿಗೆ ಕೊಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


