Cricket: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಶ್ವದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಆಜಂ!
ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಜಂ ಅರ್ಧಶತಕ ಗಳಿಸುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

ಲಾಹೋರ್: ಪಾಕಿಸ್ತಾನದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ಬಾಬರ್ ಆಜಂ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ದಾಖಲೆಗಳನ್ನು ಮುರಿದಿದ್ದಾರೆ.
ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಜಂ ಅರ್ಧಶತಕ ಗಳಿಸುವ ಮೂಲಕ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.
47 ಎಸೆತಗಳನ್ನು ಎದುರಿಸಿದ ಬಾಬರ್ ಆಜಂ 9 ಬೌಂಡರಿಗಳ ನೆರವಿನಿಂದ 68 ರನ್ ಕಲೆಹಾಕಿದ್ದಾರೆ. ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ 50ಕ್ಕೂ ಅಧಿಕ ಸ್ಕೋರ್ಗಳಿಸಿದ ವಿಶ್ವ ದಾಖಲೆಯನ್ನು ಬಾಬರ್ ಆಜಂ ತಮ್ಮದಾಗಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ದಾಖಲೆ ಪತನ
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 39 ಬಾರಿ 50+ ಸ್ಕೋರ್ಗಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.
ಪಾಕಿಸ್ತಾನ ಪರ 124 ಟಿ20 ಇನಿಂಗ್ಸ್ ಆಡಿರುವ ಬಾಬರ್ 40 ಬಾರಿ 50+ ಸ್ಕೋರ್ಗಳಿಸಿದ್ದಾರೆ. ಈ ಮೂಲಕ ಟಿ20 ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ ದಾಖಲೆ ಕೂಡ ಪತನ
ಇದಕ್ಕೂ ಮುನ್ನ ಬಾಬರ್ ಆಝಂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. ರೋಹಿತ್ ಶರ್ಮಾ (4231 ರನ್ಸ್) ಹೆಸರಿನಲ್ಲಿದ್ದ ಈ ವಿಶ್ವ ದಾಖಲೆಯನ್ನು ಮುರಿದು ಇದೀಗ ಬಾಬರ್ ಆಝಂ 4302 ರನ್ಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



