WWC Final 2025: ಶಫಾಲಿ, ದೀಪ್ತಿ ಸ್ಫೋಟಕ ಬ್ಯಾಟಿಂಗ್; ಆಫ್ರಿಕಾಗೆ 299 ರನ್ ಗುರಿ ನೀಡಿದ ಭಾರತ!
ನವಿ ಮುಂಬೈನಲ್ಲಿ ಶೆಫಾಲಿ ವರ್ಮಾ 87 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿದೆ. ನವಿ ಮುಂಬೈನಲ್ಲಿ ಶೆಫಾಲಿ ವರ್ಮಾ 87 ರನ್ ಗಳಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ದೀಪ್ತಿ ಶರ್ಮಾ ಕೂಡ 58 ರನ್ ಗಳಿಸಿದ್ದರೆ ದಕ್ಷಿಣ ಆಫ್ರಿಕಾ ಪರ ಖಾಖಾ ಮೂರು ವಿಕೆಟ್ ಪಡೆದರು.
ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್‌ಗೆ 104 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ನೀಡುವ ಮೂಲಕ ಭಾರತಕ್ಕೆ ಉತ್ತಮ ಆರಂಭ ನೀಡಿದರು. ಸ್ಮೃತಿ 58 ಎಸೆತಗಳಲ್ಲಿ 45 ರನ್ ಗಳಿಸಿದರು. ಶೆಫಾಲಿ ವರ್ಮಾ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡರು.
ಶೆಫಾಲಿ 78 ಎಸೆತಗಳಲ್ಲಿ 87 ರನ್ ಗಳಿಸಿದ್ದು ಏಳು ಬೌಂಡರಿ ಮತ್ತು ಎರಡು ಸಿಕ್ಸರ್ ಗಳಿಸಿದ್ದಾರೆ. ಹಿಂದಿನ ಪಂದ್ಯದಲ್ಲಿ ಶತಕ ಗಳಿಸಿದ್ದ ಜೆಮಿಮಾ 37 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರು. ನಾಯಕಿ ಹರ್ಮನ್ಪ್ರೀತ್ ಕೌರ್ 29 ಎಸೆತಗಳಲ್ಲಿ 20 ರನ್ ಗಳಿಸಿ ಕ್ಲೀನ್ ಬೌಲ್ಡ್ ಆದರು. ಅಮನ್‌ಜೋತ್ 14 ಎಸೆತಗಳಲ್ಲಿ 12 ರನ್ ಗಳಿಸಿದರು. ರಿಚಾ ಘೋಷ್ 34 ರನ್ ಗಳಿಸಿದರು. ದೀಪ್ತಿ ಶರ್ಮಾ 58 ರನ್ ಗಳಿಸಿ ರನೌಟ್ ಆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



