KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!
ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು KSCA ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (KSCA) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧಿ ಬಣದ ಅಭ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಆದೇಶಿಸಿತ್ತು. ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ನಡೆದ ನಾಮಪತ್ರ ಪರಿಶೀಲನೆ ವೇಳೆ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ಅಸಿಂಧುಗೊಂಡಿದೆ.

Watch | ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ವೆಂಕಿ ಸ್ಪರ್ಧೆ! ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್ ಆಡಿಸುವ ಗುರಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


