ಕ್ರಿಕೆಟ್

Cricket, 1st ODI: ದಕ್ಷಿಣ ಆಫ್ರಿಕಾಗೆ 350 ರನ್ ಬೃಹತ್ ಗುರಿ ನೀಡಿದ ಭಾರತ

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಮತ್ತು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ರ ಅರ್ಧಶತಕಗಳ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಪೇರಿಸಿತು.

Cricket, 1st ODI: ದಕ್ಷಿಣ ಆಫ್ರಿಕಾಗೆ 350 ರನ್ ಬೃಹತ್ ಗುರಿ ನೀಡಿದ ಭಾರತ
ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ
Published On :

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ.

ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಮತ್ತು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ರ ಅರ್ಧಶತಕಗಳ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಪೇರಿಸಿತು.

ಭಾರತದ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. 120 ಎಸೆತಗಳನ್ನು ಎದುರಿಸಿದ ಕೊಹ್ಲಿ, 7 ಸಿಕ್ಸರ್ ಮತ್ತು 11 ಬೌಂಡರಿಗಳ ಸಹಿತ 135 ರನ್ ಚಚ್ಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ ಶರ್ಮಾ 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 57 ರನ್ ಗಳಿಸಿದರು.

ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 3 ಸಿಕ್ಸರ್ 2 ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರೆ, ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಪೇರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ದಕ್ಷಿಣ ಆಫ್ರಿಕಾ ಪರ ಮಾರ್ಕೋ ಜೇನ್ಸನ್, ಬರ್ಗರ್, ಬಾಶ್ ಮತ್ತು ಬಾರ್ಟ್ ಮನ್ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.