ಕ್ರಿಕೆಟ್

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು.

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!
ಸಂಗ್ರಹ ಚಿತ್ರ
Published On :

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ ತೀರಿಸಿಕೊಂಡಿದೆ.

ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು 349 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ನೀಡಿದ 350 ರನ್ ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 332 ರನ್ ಗಳಿಗೆ ಆಲೌಟ್ ಆಗುವ ಮೂಲಕ 17 ರನ್ ಗಳಿಂದ ಸೋಲು ಅನುಭವಿಸಿದೆ.

ಆಫ್ರಿಕಾ ಪರ ಮ್ಯಾಥ್ಯೂ ಬ್ರೀಟ್ಜ್ಕೆ 72, ಟೋನಿ ಡಿ ಜೋರ್ಜಿ 39, ಡೆವಾಲ್ಡ್ ಬ್ರೆವಿಸ್ 37, ಮಾರ್ಕೊ ಜಾನ್ಸೆನ್ 70 ರನ್ ಬಾರಿಸಿದರು. ಭಾರತದ ಪರ ಕುಲದೀಪ್ ಯಾದವ್ 4, ಹರ್ಷಿತ್ ರಾಣಾ 3, ಅರ್ಶ್ ದೀಪ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ.

ಭಾರತದ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. 120 ಎಸೆತಗಳನ್ನು ಎದುರಿಸಿದ ಕೊಹ್ಲಿ, 7 ಸಿಕ್ಸರ್ ಮತ್ತು 11 ಬೌಂಡರಿಗಳ ಸಹಿತ 135 ರನ್ ಚಚ್ಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ ಶರ್ಮಾ 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 57 ರನ್ ಗಳಿಸಿದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 3 ಸಿಕ್ಸರ್ 2 ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರೆ, ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಪೇರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ದಕ್ಷಿಣ ಆಫ್ರಿಕಾ ಪರ ಮಾರ್ಕೋ ಜೇನ್ಸನ್, ಬರ್ಗರ್, ಬಾಶ್ ಮತ್ತು ಬಾರ್ಟ್ ಮನ್ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.