ಕ್ರಿಕೆಟ್

West Indies 1st Test: ಮೊದಲ ದಿನದಾಟ ಅಂತ್ಯ; ವಿಂಡೀಸ್ ವಿರುದ್ಧ ಭಾರತ ಮೇಲುಗೈ; 41 ರನ್ ಹಿನ್ನಡೆ!

ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 162 ರನ್ ಗೆ ಆಲೌಟ್ ಆಗಿತ್ತು.

West Indies 1st Test: ಮೊದಲ ದಿನದಾಟ ಅಂತ್ಯ; ವಿಂಡೀಸ್ ವಿರುದ್ಧ ಭಾರತ ಮೇಲುಗೈ; 41 ರನ್ ಹಿನ್ನಡೆ!
ಭಾರತ ಬ್ಯಾಟಿಂಗ್
Published On :

ಅಹ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದ್ದು, ದೈತ್ಯ ವಿಂಡೀಸ್ ವಿರುದ್ಧ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದೆ.

ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 162 ರನ್ ಗೆ ಆಲೌಟ್ ಆಗಿತ್ತು.

ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 121 ರನ್ ಕಲೆಹಾಕಿದೆ.

ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 36 ರನ್ ಗಳಿಸಿ ಔಟಾದರೆ, ಸಾಯಿ ಸುದರ್ಶನ್ ಕೇವಲ 7 ರನ್ ಗಳಿಸಿ ಔಟಾಗಿ ಮತ್ತೆ ನಿರಾಶೆ ಮೂಡಿಸಿದರು.

ಮತ್ತೊಂದು ಬದಿಯಲ್ಲಿ ತಮ್ಮ ತಾಳ್ಮೆಯ ಆಟ ಮುಂದುವರೆಸಿರುವ ಕನ್ನಡಿಗ ಕೆಎಲ್ ರಾಹುಲ್ (53 ರನ್) ಅರ್ಧಶತಕ ಗಳಿಸಿದ್ದಾರೆ. ಅವರಿಗೆ ಉತ್ತಮ ಸಾಥ್ ನೀಡಿರುವ ನಾಯಕ ಶುಭ್ ಮನ್ ಗಿಲ್ 18 ರನ್ ಗಳಿಸಿ ಅಜೇಯರಾಗಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ ಮತ್ತು ಜೇಡನ್ ಸೀಲ್ಸ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.