1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಭರ್ಜರಿ ಜಯ
ರವೀಂದ್ರ ಜಡೇಜಾ 176 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿ ಸಹಿತ ಅಜೇಯ 104 ರನ್ ಗಳಿಸಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರು.

ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
2ನೇ ದಿನಾದಟ ಅಂತ್ಯಕ್ಕೆ ಭಾರತ 448/5 ಗಳಿಸಿ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು. ರವೀಂದ್ರ ಜಡೇಜಾ 176 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿ ಸಹಿತ ಅಜೇಯ 104 ರನ್ ಗಳಿಸಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರು. ಆದರೆ 3ನೇ ದಿನದಾಟ ಆರಂಭಕ್ಕೂ ಮೊದಲೇ ಭಾರತ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ಅದರಂತೆ 286 ರನ್ ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ವಿಂಡೀಸ್ ಪಡೆ ರವೀಂದ್ರ ಜಡೇಜಾ ಮತ್ತು ಮಹಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ರೋಸ್ಟನ್ ಚೇಸ್ ಪಡೆ ಅಂತಿಮವಾಗಿ 146 ರನ್ ಗಳಿಗೆ ಆಲೌಟ್ ಆಯಿತು.
ಆ ಮೂಲಕ ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇನ್ನಿಂಗ್ಸ್ ಮತ್ತು 140 ರನ್ ಗಳ ಹೀನಾಯ ಸೋಲು ದಾಖಲಿಸಿತು. 2ನೇ ಇನ್ನಿಂಗ್ಸ್ ನಲ್ಲಿ ವಿಂಡೀಸ್ ಪರ ಅಲಿಕ್ ಅಥನಾಜೆ 38 ರನ್ ಗಳಿಸಿದರೆ, ಜಸ್ಟಿನ್ ಗ್ರೀವ್ಸ್ 25 ರನ್ ಗಳಿಸಿದ್ದಾರೆ.
ಉಳಿದಂತೆ ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಸಿರಾಜ್ 3, ಕುಲದೀಪ್ ಯಾದವ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



