ಕ್ರಿಕೆಟ್

IND vs PAK Women's World Cup: ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ

ಕ್ರಿಕೆಟ್‌ನಲ್ಲಿ ಮತ್ತೊಂದು ಭಾರತ-ಪಾಕಿಸ್ತಾನ ಘರ್ಷಣೆಗೆ ಇದು ಸಮಯ. ಕಳೆದ ಮೂರು ವಾರಗಳಲ್ಲಿ ಈ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳು ಪರಸ್ಪರ ಎದುರಿಸುತ್ತಿರುವುದು ಇದು ನಾಲ್ಕನೇ ಬಾರಿ.

IND vs PAK Women's World Cup: ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ
ಭಾರತ-ಪಾಕಿಸ್ತಾನ ತಂಡದ ನಾಯಕಿಯರು
Published On :

2026 ರ ಮಹಿಳಾ ಏಕದಿನ ವಿಶ್ವಕಪ್‌ ಕೊಲಂಬೊದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯದ ಮೇಲೆ ಹವಾಮಾನ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಬೇಕಿದೆ.

ವುಮೆನ್ಸ್ ವರ್ಲ್ಡ್​ಕಪ್​ನ 6ನೇ ಪಂದ್ಯ ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ.

ಕ್ರಿಕೆಟ್‌ನಲ್ಲಿ ಮತ್ತೊಂದು ಭಾರತ-ಪಾಕಿಸ್ತಾನ ಘರ್ಷಣೆಗೆ ಇದು ಸಮಯ. ಕಳೆದ ಮೂರು ವಾರಗಳಲ್ಲಿ ಈ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳು ಪರಸ್ಪರ ಎದುರಿಸುತ್ತಿರುವುದು ಇದು ನಾಲ್ಕನೇ ಬಾರಿ. ಆದರೆ, ಈ ಬಾರಿ ಅದು ಮಹಿಳಾ ವಿಶ್ವಕಪ್‌ನಲ್ಲಿ.

ಏಕದಿನ ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 11 ಪಂದ್ಯಗಳನ್ನು ಸಹ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲೂ ಈ ಮ್ಯಾಚ್​ನ ಲೈವ್ ಸ್ಟೀಮಿಂಗ್ ಇರಲಿದೆ.

ಭಾರತವು ಶ್ರೀಲಂಕಾ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಪಾಕಿಸ್ತಾನವು ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅವಮಾನಕರ ಸೋಲನ್ನು ಅನುಭವಿಸಿ ಪ್ರಸ್ತುತ ಎಂಟು ತಂಡಗಳ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಎರಡೂ ತಂಡಗಳು ಪರಸ್ಪರ ಸೆಣಸಾಡಲು ಸಿದ್ಧವಾಗುತ್ತಿದ್ದಂತೆ, ಮಳೆಯ ಕಾರ್ಮೋಡ ಕವಿದಿದೆ.

IND-W vs PAK-W ಪಂದ್ಯ ವೇಳೆ ಮಳೆಯಾಗುವ ಸಾಧ್ಯತೆಗಳು, ತಾಪಮಾನ ಸುಮಾರು 29-26°C ಇದ್ದು, ನಿನ್ನೆ ಶ್ರೀಲಂಕಾ vs ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಕೈಕೊಟ್ಟಿತು.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಅಮನ್​ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ನೇಹ್ ರಾಣಾ.

ಪಾಕಿಸ್ತಾನ್ ತಂಡ: ಫಾತಿಮಾ ಸನಾ (ನಾಯಕಿ), ಮುನೀಬಾ ಅಲಿ ಸಿದ್ದಿಕಿ (ಉಪನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಐಮನ್ ಫಾತಿಮಾ, ನಶ್ರಾ ಸುಂಧು, ನತಾಲಿಯಾ ಪರ್ವೇಝ್, ಒಮೈಮಾ ಸೊಹೈಲ್, ರಮೀನ್ ಶಮೀಮ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಶಾವಾಲ್ ಝುಲ್ಫಿಕರ್, ಸಿದ್ರಾ ಅಮಿನ್, ಸಿದ್ರಾ ಅಮಿನ್, ಸಿದ್ರಾ ನವಾಝ್, ಸೈದಾ ಅರೂಬ್ ಶಾ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.