ಕ್ರಿಕೆಟ್

India in 2nd ODI: ಭಾರತ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

India in 2nd ODI: ಭಾರತ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ಎರಡನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
Published On :

ಅಡಿಲೇಡ್: ಗುರುವಾರ ಇಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಜೋಶ್ ಫಿಲಿಪ್ ಬದಲಿಗೆ ಅಲೆಕ್ಸ್ ಕ್ಯಾರಿ ಮತ್ತು ನಾಥನ್ ಎಲ್ಲಿಸ್ ಬದಲಿಗೆ ಕ್ಸೇವಿಯರ್ ಬಾರ್ಟ್ಲೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿರುವ ಆಸೀಸ್ ಸರಣಿ ಗೆಲ್ಲುವ ತವಕದಲ್ಲಿದ್ದರೆ, ಯಾವುದೇ ಬದಲಾವಣೆ ಇಲ್ಲದ ಟೀಂ ಇಂಡಿಯಾ ಸರಣಿ ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.

ತಂಡಗಳು: ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲ್ಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.