ಕ್ರಿಕೆಟ್

Women's World Cup 2025: ಜೆಮಿಮಾ ಭರ್ಜರಿ ಶತಕ; 5 ವಿಕೆಟ್ ಗಳಿಂದ ಆಸೀಸ್ ಸೋಲಿಸಿ, ಭಾರತ ಫೈನಲ್ ಗೆ ಲಗ್ಗೆ!

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 338 ರನ್ ಗಳಿಸಿ ಆಲೌಟ್ ಆಗಿತ್ತು.

Women's World Cup 2025: ಜೆಮಿಮಾ ಭರ್ಜರಿ ಶತಕ; 5 ವಿಕೆಟ್ ಗಳಿಂದ ಆಸೀಸ್ ಸೋಲಿಸಿ, ಭಾರತ ಫೈನಲ್ ಗೆ ಲಗ್ಗೆ!
ಫೈನಲ್ ಗೆ ಲಗ್ಗೆ ಇಟ್ಟ ಭಾರತ
Published On :

ನವಿ ಮುಂಬೈ: ಇಲ್ಲಿನ ಡಿ.ವೈ. ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್ ಅಂತರದಿಂದ ಸೋಲಿಸಿದ ಭಾರತ, ಫೈನಲ್ ಗೆ ಲಗ್ಗೆ ಇಟ್ಟಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 338 ರನ್ ಗಳಿಸಿ ಆಲೌಟ್ ಆಗಿತ್ತು. ಭಾರತ ಪರ ಬೌಲರ್ ಗಳಾದ ದೀಪ್ತಿ ಶರ್ಮಾ, ಶ್ರೀ ಚಾರಣಿ ತಲಾ 2 ವಿಕೆಟ್ ಪಡೆದರೆ, ಅಮಾನ್ ಜೋತ್ ಕೌರ್, ರಾಧಾ ಯಾದವ್, ಕ್ರಾಂತಿ ಗೌಡ್ ತಲಾ ಒಂದೊಂದು ವಿಕೆಟ್ ಪಡೆದರು

ಆಸೀಸ್ ನೀಡಿದ ಬೃಹತ್ ರನ್ ಗಳ ಬೆನ್ನತ್ತಿದ್ದ ಭಾರತ ತಂಡ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ 10, ಸ್ಮೃತಿ ಮಂಧಾನ ಕೇವಲ 24 ರನ್ ಗಳಿಸಿ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.

ಬಳಿಕ ಜೆಮಿಯಾ ರೋಡ್ರಿಗಸ್ ಅವರ ಆಕರ್ಷಕ ಶತಕ (127) ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಅರ್ಧ ಶತಕ (89) ರನ್ ದೀಪ್ತಿ ಶರ್ಮಾ 24, ರಿಚಾ ಘೋಷ್ 26 ಹಾಗೂ ಅಮಾನ್ ಜೋತ್ ಕೌರ್ ಅವರ 15 ರನ್ ಗಳ ನೆರವಿನಿಂದ 48.3 ಓವರ್ ಗಳಲ್ಲಿ ಇನ್ನೂ 9 ಎಸೆತ ಬಾಕಿಯಿರುವಂತೆಯೇ ಗೆಲುವಿನ ನಗೆ ಬೀರಿತು. ಜೆಮಿಯಾ ರೋಡ್ರಿಗಸ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ: ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಕನಸು ಕಾಣುತ್ತಿರುವ ಭಾರತ ತಂಡ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಸೆಣಸಾಟ ನಡೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.