IPL 2026: ರೋಹಿತ್ ಶರ್ಮಾ KKR ಸೇರ್ತಾರಾ? ಮುಂಬೈ ಇಂಡಿಯನ್ಸ್ Cryptic Post!
ರೋಹಿತ್ ಶರ್ಮಾ ಅವರ ಆಪ್ತ ಅಭಿಷೇಕ್ ನಾಯ್ಯರ್, ಕೆಕೆಆರ್ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರಿಂದ ಈ ವದಂತಿಗಳು ಹರಿದಾಡುತ್ತಿವೆ.

ಮುಂಬೈ: 2026ರ ಐಪಿಎಲ್ ನಲ್ಲಿ ಭಾರತದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತೊರೆದು ಕೋಲ್ಕತ್ತಾ ನೈಟ್ ರೈಡರ್ಸ್ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಮುಂಬೈ ಇಂಡಿಯನ್ಸ್ ಗುರುವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ Cryptic Post ಮೂಲಕ ರೋಹಿತ್ ಶರ್ಮಾ ಕುರಿತ ಊಹಾಪೋಹಗಳನ್ನು ತಳ್ಳಿಹಾಕಿದೆ. ಐಪಿಎಲ್ 2026 ಹಿನ್ನೆಲೆಯಲ್ಲಿ ಅವರ ಬದ್ಧತೆಯನ್ನು ಪ್ರತಿಪಾದಿಸಿದೆ.
ರೋಹಿತ್ ಶರ್ಮಾ ಅವರ ಆಪ್ತ ಅಭಿಷೇಕ್ ನಾಯ್ಯರ್, ಕೆಕೆಆರ್ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದರಿಂದ ಈ ವದಂತಿಗಳು ಹರಿದಾಡುತ್ತಿವೆ. ಆದರೆ, ಈ ವದಂತಿಗಳು ನಿಜವಲ್ಲ ಎಂದು ಮುಂಬೈ ಇಂಡಿಯನ್ಸ್ ಪ್ರಾಂಚೈಸಿ ಸ್ಪಷ್ಟಪಡಿಸಿದೆ.
ರೋಹಿತ್ ಶರ್ಮಾ ಎಲ್ಲಿಯೂ ಹೋಗಲ್ಲ. ಐಪಿಎಲ್ ನಲ್ಲಿ ಇತರ ಯಾವುದೇ ಪ್ರಾಂಚೈಸಿ ಪರ ಆಡಲ್ಲ. ಮುಂಬೈ ಇಂಡಿಯನ್ಸ್ ಪರ ಆಡಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಮೂಲಗಳು ಹೇಳಿವೆ.
2011 ರಿಂದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಐಪಿಎಲ್ ಪ್ರಶಸ್ತಿ ಗೆದ್ದಿದೆ. ಆದರೂ 2024ರಿಂದ ಅವರನ್ನು ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವ ವಹಿಸಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



