ಕ್ರಿಕೆಟ್

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಜಯ

ದುಬೈ ನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ UAE ವಿರುದ್ಧ 9 ವಿಕೆಟ್ ಗಳ ಜಯ ಗಳಿಸಿದೆ.

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಜಯ
ಕುಲದೀಪ್ ಯಾದವ್ — online desk
Published On :

ದುಬೈ: ದುಬೈ ನಲ್ಲಿ ನಡೆದ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ UAE ವಿರುದ್ಧ 9 ವಿಕೆಟ್ ಗಳ ಜಯ ಗಳಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್ ಗಳು ಉತ್ತಮ ಆರಂಭ ನೀಡಿ ಆತಿಥೇಯ ತಂಡವನ್ನು 57 ರನ್‌ಗಳಿಗೆ ಮಂಡಿಯೂರುವಂತೆ ಮಾಡಿದರು. ಯುಎಇ ತಂಡವು 13.1 ಓವರ್ ನಲ್ಲಿ 57 ರನ್‌ಗಳಿಗೆ ಸರ್ವಪತನ ಕಂಡಿತು. ಕುಲದೀಪ್ ಯಾದವ್ 4 ವಿಕೆಟ್‌ಗಳನ್ನು ಕಬಳಿಸಿದರೇ, ಶಿವಂ ದುಬೆ 3, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ 1-1 ವಿಕೆಟ್‌ಗಳನ್ನು ಪಡೆದಿದರು.

ಅತ್ಯಂತ ಕಡಿಮೆ ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತ, ಕೇವಲ 4.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿ 9 ವಿಕೆಟ್ ಗೆಲುವು ತನ್ನದಾಗಿಸಿಕೊಂಡಿತು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 30 ರನ್ ಗಳಿಸಿದರೆ, ಶುಭ್ ಮನ್ ಗಿಲ್ 9 ಎಸೆತಗಳಲ್ಲಿ 20 ರನ್ ಸೂರ್ಯ ಕುಮಾರ್ ಯಾದವ್ 2 ಎಸೆತಗಳಲ್ಲಿ 7 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.