ಕ್ರಿಕೆಟ್

Asia Cup 2025: Oman ವಿರುದ್ಧ ಭಾರತಕ್ಕೆ 21 ರನ್ ಜಯ; Arshdeep Singh ಅಪರೂಪದ ದಾಖಲೆ ಮಾಡಿದ ಮೊದಲ ಬೌಲರ್!

ಭಾರತ ನೀಡಿದ 189 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಒಮನ್ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 167ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Asia Cup 2025: Oman ವಿರುದ್ಧ ಭಾರತಕ್ಕೆ 21 ರನ್ ಜಯ; Arshdeep Singh ಅಪರೂಪದ ದಾಖಲೆ ಮಾಡಿದ ಮೊದಲ ಬೌಲರ್!
ಭಾರತಕ್ಕೆ ಭರ್ಜರಿ ಜಯ
Published On :

ಅಬುದಾಬಿ: 2025ರ ಏಷ್ಯಾಕಪ್‌ ಟೂರ್ನಿಯ ಅಂತಿಮ ಗ್ರೂಪ್ ಸ್ಟೇಜ್ ಪಂದ್ಯದಲ್ಲಿ ಒಮನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.

ಭಾರತ ನೀಡಿದ 189 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಒಮನ್ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 167 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಆ ಮೂಲಕ ಭಾರತದ ಎದುರು 21 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

ಒಮನ್ ಪರ ಆರಂಭಿಕ ಆಟಗಾರ ಹಾಗೂ ನಾಯಕ ಜತೀಂದರ್ ಸಿಂಗ್ 32 ರನ್ ಗಳಿಸಿದರೆ, ಅಮೀರ್ ಕಲೀಮ್ ಅರ್ಧಶತಕ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಹಮ್ಮದ್ ಮಿರ್ಜಾ ಕೂಡ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ತಂಡವನ್ನು ಸೋಲಿನಿಂದ ಪಾರು ಮಾಡಲು ಯತ್ನಿಸಿದರಾದರೂ ಅಷ್ಟು ಹೊತ್ತಿಗೆ ಸಮಯ ಮಿಂಚಿ ಹೋಗಿತ್ತು.

ಅಂತಿಮವಾಗಿ ಒಮನ್ ತಂಡ ನಿಗಧಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ 21 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

ಭಾರತದ ಪರ ಕುಲದೀಪ್ ಯಾದವ್, ಹರ್ಷಿತ್ ರಾಣಾ, ಅರ್ಶ್ ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಕಬಳಿಸಿದರು.

ಅರ್ಶ್ ದೀಪ್ ಸಿಂಗ್ 100 ವಿಕೆಟ್ ಸಾಧನೆ

ಇದೇ ಪಂದ್ಯದಲ್ಲಿ ಭಾರತದ ಅರ್ಶ್ ದೀಪ್ ಸಿಂಗ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು. ಒಮನ್ ನ ವಿನಾಯಕ್ ಶುಕ್ಲಾ ರನ್ನು ಔಟ್ ಮಾಡುವ ಮೂಲಕ ಅರ್ಶ್ ದೀಪ್ ಸಿಂಗ್ ಈ ಸಾಧನೆ ಮಾಡಿದರು.

ಆ ಮೂಲಕ ಅರ್ಶ್‌ದೀಪ್ ಟಿ20ಐ ನಲ್ಲಿ 100 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.