ಕ್ರಿಕೆಟ್

Asia Cup 2025: ಔಪಚಾರಿಕ ಪಂದ್ಯದಲ್ಲಿ oman ಗೆ ಬೃಹತ್ ಗುರಿ ನೀಡಿದ ಭಾರತ!

ಅಬುದಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

Asia Cup 2025: ಔಪಚಾರಿಕ ಪಂದ್ಯದಲ್ಲಿ oman ಗೆ ಬೃಹತ್ ಗುರಿ ನೀಡಿದ ಭಾರತ!
ಸಂಜು ಸ್ಯಾಮ್ಸನ್ ಬ್ಯಾಟಿಂಗ್
Published On :

ಅಬುದಾಬಿ: 2025ರ ಏಷ್ಯಾಕಪ್‌ ಟೂರ್ನಿಯ ಅಂತಿಮ ಗ್ರೂಪ್ ಸ್ಟೇಜ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಒಮನ್ ಗೆ ಗೆಲ್ಲಲು ಬೃಹತ್ ಗುರಿ ನೀಡಿದೆ.

ಅಬುದಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಸಂಜು ಸ್ಯಾಮ್ಸನ್ (56 ರನ್) ಮತ್ತು ಅಭಿಷೇಕ್ ಶರ್ಮಾ (38 ರನ್) ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಒಮನ್ ಗೆ ಗೆಲ್ಲಲು 189 ರನ್ ಗಳ ಬೃಹತ್ ಗುರಿ ನೀಡಿದೆ.

ಟೀಮ್ ಇಂಡಿಯಾ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ 41 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ ಅರ್ಧಶತಕ ಗಳಿಸಿದರು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 15 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 38 ರನ್ ಗಳಿಸಿ ಔಟಾದರು. ಶುಭ್​ಮನ್ ಗಿಲ್ ಕೇವಲ 5 ರನ್‌ಗಳಿಗೆ ಶಾ ಫೈಸಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಒಮನ್ ಪರ ಶಾ ಫೈಸಲ್, ಜಿತೆನ್ ರಾಮನಂದಿ ಮತ್ತು ಅಮಿರ್ ಕಲೀಮ್ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.