ಕ್ರಿಕೆಟ್

Asia Cup 2025: 'ಬಿದ್ರೂ ಮೀಸೆ ಮಣ್ಣಾಗ್ಲಿಲ್ಲಾ..!' ಅರ್ಧಶತಕ ಸಿಡಿಸಿ 'Gun-Firing' ಸಂಭ್ರಮ ಮಾಡಿದ ಪಾಕ್ ಬ್ಯಾಟರ್!

ಫರ್ಹಾನ್ ರ ಈ ಗನ್ ಫೈರ್ ಸಂಭ್ರಮ ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯನ್ನು ಅಣಕಿಸುವಂತಿತ್ತು.

Asia Cup 2025: 'ಬಿದ್ರೂ ಮೀಸೆ ಮಣ್ಣಾಗ್ಲಿಲ್ಲಾ..!' ಅರ್ಧಶತಕ ಸಿಡಿಸಿ 'Gun-Firing' ಸಂಭ್ರಮ ಮಾಡಿದ ಪಾಕ್ ಬ್ಯಾಟರ್!
Gun-Firing ಸಂಭ್ರಮ ಮಾಡಿದ ಪಾಕ್ ಬ್ಯಾಟರ್
Published On :

ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ವಿವಾದಾತ್ಮಕ ಸಂಭ್ರಮಾಚರಣೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಹೌದು.. ಇಂದು ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಅರ್ಧಶತಕ ಸಿಡಿಸಿದ ಪಾಕಿಸ್ತಾನದ ಬ್ಯಾಟರ್ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕ ಸಿಡಿಸುತ್ತಲೇ ತನ್ನ ಬ್ಯಾಟ್ ಅನ್ನೇ ಗನ್ ರೀತಿಯಲ್ಲಿ ತೋರಿಸಿ 'Gun-Firing' Celebration ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಫರ್ಹಾನ್ ರ ಈ ಗನ್ ಫೈರ್ ಸಂಭ್ರಮ ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯನ್ನು ಅಣಕಿಸುವಂತಿತ್ತು. ಅಂದು ರಣಾಂಗಣದಲ್ಲಿ ಪೆಟ್ಟು ತಿಂದಿದ್ದ ಪಾಕಿಸ್ತಾನ ಇಂದು ಮೈದಾನದಲ್ಲಿ ಇಂತಹ ವರ್ತನೆಗಳ ಮೂಲಕ ಭಾರತ ಮತ್ತು ಭಾರತೀಯ ಆಟಗಾರರನ್ನು ಕೆಣಕುವ ಕೆಲಸ ಮಾಡಿದೆ.

ಇನ್ನು ಭಾರತದ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡಿದ ಪಾಕ್ ಆರಂಭಿಕ ಬ್ಯಾಟರ್ ಫರ್ಹಾನ್ ಕೇವಲ 45 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 58 ರನ್ ಕಲೆ ಹಾಕಿದರು. ಬಳಿಕ ಶಿವಂದುಬೆ ಬೌಲಿಂಗ್ ನಲ್ಲಿ ಸೂರ್ಯ ಕುಮಾರ್ ಯಾದವ್ ಬೌಲಿಂಗ್ ನಲ್ಲಿ ಔಟ್ ಆದರು.

2 ಜೀವದಾನ ಪಡೆದಿದ್ದ ಫರ್ಹಾನ್

ಕೇವಲ 34 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದ ಫರ್ಹಾನ್ ರ ಈ ಭರ್ಜರಿ ಬ್ಯಾಟಿಂಗ್ ಗೆ ಒಂದು ರೀತಿಯಲ್ಲಿ ಭಾರತೀಯ ಫೀಲ್ಡರ್ ಗಳೇ ಕಾರಣ ಎನ್ನಬಹುದು. ಏಕೆಂದರೆ ತಮಗೆ ಸಿಕ್ಕ ಎರಡು ಜೀವದಾನಗಳನ್ನು ಫರ್ಹಾನ್ ಅಧ್ಭುತವಾಗಿ ಬಳಸಿಕೊಂಡು ಅರ್ಧಶತಕ ಗಳಿಸಿದರು. ಫರ್ಹಾನ್ ನೀಡಿದ ಎರಡು ಕ್ಯಾಚ್ ಗಳನ್ನು ಕೈ ಚೆಲ್ಲುವ ಮೂಲಕ ಅಭಿಶೇಕ್ ಶರ್ಮಾ ಜೀವದಾನ ನೀಡಿದ್ದರು.

ಪಾಕ್ ಬ್ಯಾಟಿಂಗ್ ಗೆ ಜೀವ ತುಂಬಿದ್ದ ಫರ್ಹಾನ್

ಇನ್ನು ಫರ್ಹಾನ್ ರ ಈ ಉತ್ತಮ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ಮೊದಲ ಹತ್ತು ಓವರ್ ನಲ್ಲಿ ಮೇಲುಗೈ ಸಾಧಿಸಿತ್ತು. ಕೇವಲ 10 ಓವರ್ ನಲ್ಲಿ 91ರನ್ ಪೇರಿಸಿತ್ತು. ಆದರೆ ಬಳಿಕ ಭಾರತದ ಸ್ಪಿನ್ನರ್ ಗಳು ಪಾಕಿಸ್ತಾನದ ರನ್ ವೇಗಕ್ಕೆ ಕಡಿವಾಣ ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.