IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು
ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್(SRH) ತಂಡ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್(KKR) ವಿರುದ್ಧ 65 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್ ಮಾಡಿದ ಹೈದರಾಬಾದ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 226 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.
ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ(48) ಹಾಗೂ ಟ್ರಾವಿಸ್ ಹೆಡ್(46) ಸ್ಫೋಟಕ ಬ್ಯಾಟಿಂಗ್ ಮಾಡಿ, 81 ರನ್ ಗಳ ಜೊತೆಯಾಟ ಆಡಿದರು. ನಂತರ ಹೆನ್ರಿಚ್ ಕ್ಲಾಸನ್ ಅವರ ಅರ್ಧ ಶತಕ(52)ದ ನೆರವಿನಿಂದ ಹೈದರಾಬಾದ್ ತಂಡ 226 ರನ್ ಸೇರಿಸಿತು.
ಕೋಲ್ಕತ್ತಾ ಪರ ಬ್ಲೆಸ್ಸಿಂಗ್ ಮುಜರಬಾನಿ ಅವರು ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು.
ಗೆಲುವಿಗೆ 227 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್, 16 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 161 ರನ್ ಗಳಿಸುವ ಮೂಲಕ ಹೀನಾಯ ಸೋಲು ಅನುಭವಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



