ಕ್ರಿಕೆಟ್

IPL 2026: ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ; ಅಭಿಷೇಕ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ!

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ಪ್ರಕಾರ ಲೆವೆಲ್ 1 ರ ಅಪರಾಧವನ್ನು ಅವರು ಒಪ್ಪಿಕೊಂಡಿದ್ದು, ಮ್ಯಾಚ್ ರೆಫರಿ ನೀಡಿದ ದಂಡವನ್ನು ಒಪ್ಪಿಕೊಂಡಿದ್ದಾರೆ.

IPL 2026: ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ; ಅಭಿಷೇಕ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ!
ಅಭಿಷೇಕ್ ಶರ್ಮಾ
Published On :

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಕೆಕೆಆರ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ನೀತಿ ನಿಯಮ ಉಲ್ಲಂಘನೆಗಾಗಿ ಸನ್‌ರೈಸರ್ಸ್ ಹೈದರಾಬಾದ್ ಉಪನಾಯಕ ಅಭಿಷೇಕ್ ಶರ್ಮಾ ಗೆ ಪಂದ್ಯದ ಶುಲ್ಕದ ಶೇ. 25 ರಷ್ಟು ದಂಡವನ್ನು ವಿಧಿಸಲಾಗಿದೆ. ಒಂದು ಡಿಮೆರಿಟ್ ಪಾಯಿಂಟ್ ಕೂಡಾ ಪಡೆದಿದ್ದಾರೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ಪ್ರಕಾರ ಲೆವೆಲ್ 1 ರ ಅಪರಾಧವನ್ನು ಅವರು ಒಪ್ಪಿಕೊಂಡಿದ್ದು, ಮ್ಯಾಚ್ ರೆಫರಿ ನೀಡಿದ ದಂಡವನ್ನು ಒಪ್ಪಿಕೊಂಡಿದ್ದಾರೆ.

ಐಪಿಎಲ್ ನೀತಿ ನಿಯಮಗಳ ಲೆವೆಲ್ 1ರ ಉಲ್ಲಂಘನೆಯಲ್ಲಿ ಮ್ಯಾಚ್ ಮ್ಯಾಚ್ ರೆಫರಿಯ ನಿರ್ಧಾರ ಅಂತಿಮವಾಗಿರುತ್ತದೆ. ಪವರ್‌ಪ್ಲೇನಲ್ಲಿ SRH ಉತ್ತಮ ರನ್ ಗಳಿಸಲು ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 48 ರನ್ ಗಳಿಸಿದರು. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ಕೆಕೆಆರ್ ವಿರುದ್ಧ 65 ರನ್ ಗಳ ಭರ್ಜರಿ ಗೆಲುವು ಸಾಧಿಸಿತು.

ಆದರೆ ಒಂಬತ್ತನೇ ಓವರ್‌ನಲ್ಲಿ ಬ್ಲೆಸ್ಸಿಂಗ್ ಮುಜರಬಾನಿ ಎಸೆತದಲ್ಲಿ ವರುಣ್ ಚಕ್ರವರ್ತಿ ಡೈವಿಂಗ್ ಕ್ಯಾಚ್ ತೆಗೆದುಕೊಂಡ ನಂತರ ಟಿವಿ ಅಂಪೈರ್ ನಿತಿನ್ ಮೆನನ್ ಅವರ ನಿರ್ಧಾರದ ಬಗ್ಗೆ ಭಿನ್ನಾಭಿಪ್ರಾಯವನ್ನು ತೋರಿಸಿದ್ದಕ್ಕಾಗಿ ಅಭಿಷೇಕ್ ಶರ್ಮಾಗೆ ದಂಡ ಹಾಕಲಾಗಿದೆ.

ಕ್ಲೀನ್ ಕ್ಯಾಚ್ ಆಗಿತ್ತು. ಮೆನನ್ ಕೂಡಾ ಕಾನೂನುಬದ್ಧ ಕ್ಯಾಚ್ ಎಂದು ತೀರ್ಪು ನೀಡಿದ್ದರು. ಆದರೆ ಅದನ್ನು ಅಭಿಷೇಕ್ ಒಪ್ಪಲಿಲ್ಲ. ಮೈದಾನದಿಂದ ಹೊರನಡೆಯುತ್ತಿರುವಾಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.