IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್; ಕೊನೆಯ ಓವರ್‌ನಲ್ಲಿ ಸೋತ Gujarat Titans
ಇಂಡಿಯನ್ ಪ್ರಿಮಿಯರ್ ಲೀಗ್ (2026) ಟೂರ್ನಮೆಂಟ್ 9ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರೋಚಿತ ಸೋಲು ಅನುಭವಿಸಿದೆ.

ಇಂಡಿಯನ್ ಪ್ರಿಮಿಯರ್ ಲೀಗ್ (2026) ಟೂರ್ನಮೆಂಟ್ 9ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರೋಚಿತ ಸೋಲು ಅನುಭವಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 210 ರನ್ ಪೇರಿಸಿತ್ತು. 211 ರನ್ ಗಳ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ 204 ರನ್ ಪೇರಿಸಲಷ್ಟೇ ಶಕ್ತವಾಗಿದ್ದು 6 ರನ್ ಗಳಿಂದ ಸೋಲು ಕಂಡಿತು.
ಟೈಟಾನ್ಸ್ ತಂಡ ಪರ ಸಾಯಿ ಸುದರ್ಶನ್ 73 ರನ್ ಬಾರಿಸುವ ಮೂಲಕ ಭದ್ರ ಬುನಾದಿ ಹಾಕಿದರು. ಆದರೆ ಇನ್ನುಳಿದ ಆಟಗಾರರು ಯಾರೂ ಉತ್ತರ ರನ್ ಕಲೆಹಾಕದ ಕಾರಣ ತಂಡ ಸೋಲು ಅನುಭವಿಸಿತು. ರಾಯಲ್ಸ್ ಪರ ರವಿ ಬಿಷ್ಣೋಯ್ 4 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.
ರಾಜಸ್ಥಾನ ರಾಯಲ್ಸ್ ಪರ ಧ್ರುವ್ ಜುರೆಲ್ 75 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಅಲ್ಲದೆ ಯಶಸ್ವಿ ಜೈಸ್ವಾಲ್ ಕೂಡ ಅರ್ಧಶತಕ ಗಳಿಸಿದರು. ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದರು. ಪವರ್‌ಪ್ಲೇನಲ್ಲಿ RR ವಿಕೆಟ್ ಕಳೆದುಕೊಳ್ಳದೆ 69 ರನ್ ಗಳಿಸಿತ್ತು. ವೈಭವ್ ಸೂರ್ಯವಂಶಿ 18 ಎಸೆತಗಳಲ್ಲಿ 31 ರನ್ ಗಳಿಸಿದರೆ, ಜೈಸ್ವಾಲ್ 36 ಎಸೆತಗಳಲ್ಲಿ 55 ರನ್ ಗಳಿಸಿದರು. ನಾಯಕ ರಿಯಾನ್ ಪರಾಗ್ ಕೇವಲ 8 ರನ್ ಗಳಿಸಿ ವಿಫಲರಾದರು. ಕಗಿಸೊ ರಬಾಡ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ ಮತ್ತು ರಶೀದ್ ಖಾನ್ ತಲಾ ಒಂದು ವಿಕೆಟ್ ಪಡೆದರು.
ಅಹಮದಾಬಾದ್ ಮೈದಾನದಲ್ಲಿ ಅತ್ಯಧಿಕ ರನ್ ಚೇಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮಾಡಿತ್ತು. 2023ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 205 ರನ್‌ಗಳ ಗುರಿಯನ್ನು ಬೆನ್ನಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



