IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!
ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ನಗೆ ಬೀರಿದೆ.

ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ನಗೆ ಬೀರಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗೈಕ್ವಾಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ ಓವರ್ ನಲ್ಲಿ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 250 ರನ್ ಪೇರಿಸಿತು. ಆರ್ ಸಿಬಿ ನೀಡಿದ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಸಿಎಸ್ ಕೆ 19.4 ಓವರ್ ನಲ್ಲಿ 207 ರನ್ ಗಳಿಗೆ ಆಲೌಟ್ ಆಗಿದ್ದು 43 ರನ್ ಗಳಿಂದ ಸೋತಿದೆ.
ಚೆನ್ನೈ ತಂಡ ಆರಂಭಿಕ ಆಘಾತ ಎದುರಿಸಿತ್ತು. ಸಂಜು ಸ್ಯಾಮ್ಸನ್ 9, ರಿತುರಾಜ್ ಗಾಯಕ್ವಾಡ್ 7 ಮತ್ತು ಆಯೂಷ್ ಮಾತ್ರೆ 1 ರನ್ ಗಳಿಸಿ ಔಟಾದರು. ನಂತರ ತಂಡಕ್ಕೆ ಆಸರೆಯಾಗಿದ್ದು ಸರ್ಫರಾಜ್ ಖಾನ್, ಅವರು 50 ರನ್ ಗಳಿಸಿ ಔಟಾದರು. ನಂತರ ಪ್ರಶಾಂತ್ ವೀರ್ 43 ರನ್ ಮತ್ತು ಓವರ್ಟನ್ 37 ರನ್ ಗಳಿಸಿದರು. ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ 3, ಡಫಿ, ಅಭಿನಂದನ್ ಸಿಂಗ್ ಮತ್ತು ಕೃನಾಲ್ ಪಾಂಡೆ ತಲಾ 2 ವಿಕೆಟ್ ಪಡೆದರು.
ಆರ್ಸಿಬಿ ಪರ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ಆರಂಭಿಸಿದರು. ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ವಿರಾಟ್ ಕೊಹ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಸ್ವಲ್ಪ ಸಮಯದ ನಂತರ ಫಿಲ್ ಸಾಲ್ಟ್ 30 ಎಸೆತಗಳಲ್ಲಿ 46 ರನ್ ಗಳಿಸಿದರು. ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 50 ರನ್ ಅರ್ಧ ಶತಕ ಬಾರಿಸಿ ಔಟಾದರು. ನಾಯಕ ರಜತ್ ಪಾಟಿದಾರ್ 19 ಎಸೆತಗಳಲ್ಲಿ 48 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಟಿಮ್ ಡೇವಿಡ್ 25 ಎಸೆತಗಳಲ್ಲಿ 3 ಬೌಂಡರಿ ಮತ್ತು 8 ಸಿಕ್ಸರ್ಗಳು ಸೇರಿದಂತೆ 70 ರನ್ ಗಳಿಸಿದರು. ಅವರ ಸ್ಟ್ರೈಕ್ ರೇಟ್ 280 ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



