IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB
ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಫೋಟಕ ಬ್ಯಾಟಿಂಗ್ ಮಾಡಿದೆ. ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಸಿಎಸ್‌ಕೆ ಬೌಲರ್‌ಗಳನ್ನು ಛಿದ್ರಗೊಳಿಸಿದರು.

ಐಪಿಎಲ್ 2026ರ 11ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸ್ಫೋಟಕ ಬ್ಯಾಟಿಂಗ್ ಮಾಡಿದೆ. ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಸಿಎಸ್‌ಕೆ ಬೌಲರ್‌ಗಳನ್ನು ಛಿದ್ರಗೊಳಿಸಿದರು. ಬಂದ ಪ್ರತಿಯೊಬ್ಬರೂ ಬೌಂಡರಿ ಮತ್ತು ಸಿಕ್ಸ್‌ಗಳಿಗೆ ಹೊಡೆದರು. ಟಿಮ್ ಡೇವಿಡ್ ಇಂದು ಸ್ಫೋಟಕ ಫಾರ್ಮ್ ನಲ್ಲಿದ್ದು 25 ಎಸೆತಗಳಲ್ಲಿ 70 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು ಎಂಟು ಸಿಕ್ಸರ್‌ಗಳನ್ನು ಬಾರಿಸಿದ್ದು ಒಂದು ಚೆಂಡು ಕ್ರೀಡಾಂಗಣದಿಂದ ಹೊರಗೆ ಹೋಯಿತು. ಆರ್‌ಸಿಬಿ ಒಟ್ಟು 250 ರನ್‌ಗಳನ್ನು ಪೇರಿಸಿದ್ದು ಸಿಎಸ್‌ಕೆ ತಮ್ಮ ಸೋಲಿನ ಸರಣಿಯನ್ನು ಮುರಿಯಲು 251 ರನ್‌ಗಳನ್ನು ಗಳಿಸಬೇಕಾಗಿದೆ.
ಈ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗೈಕ್ವಾಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆರ್‌ಸಿಬಿ ಪರ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ಆರಂಭಿಸಿದರು. ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ವಿರಾಟ್ ಕೊಹ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಸ್ವಲ್ಪ ಸಮಯದ ನಂತರ ಫಿಲ್ ಸಾಲ್ಟ್ 30 ಎಸೆತಗಳಲ್ಲಿ 46 ರನ್ ಗಳಿಸಿದರು. ದೇವದತ್ ಪಡಿಕ್ಕಲ್ 29 ಎಸೆತಗಳಲ್ಲಿ 50 ರನ್ ಅರ್ಧ ಶತಕ ಬಾರಿಸಿ ಔಟಾದರು.
ನಾಯಕ ರಜತ್ ಪಾಟಿದಾರ್ 19 ಎಸೆತಗಳಲ್ಲಿ 48 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಟಿಮ್ ಡೇವಿಡ್ 25 ಎಸೆತಗಳಲ್ಲಿ 3 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದಂತೆ 70 ರನ್ ಗಳಿಸಿದರು. ಅವರ ಸ್ಟ್ರೈಕ್ ರೇಟ್ 280 ಆಗಿತ್ತು. ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 250 ರನ್ ಗಳಿಸಿದೆ. ಇದು ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿಯ ಮೂರನೇ 250 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಆಗಿದೆ.
ಇದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿಯ ಅತ್ಯಧಿಕ ಮೊತ್ತವಾಗಿದೆ. ಆಶ್ಚರ್ಯಕರವೆಂದರೆ, ಆರ್‌ಸಿಬಿ ಇದೇ ಮೈದಾನದಲ್ಲಿ ಮೂರು ಬಾರಿ 250 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದೆ. ಜೇಮೀ ಓವರ್ಟನ್ ಅವರ ಓವರ್‌ನಲ್ಲಿ ಟಿಮ್ ಡೇವಿಡ್ ಒಬ್ಬರೇ 30 ರನ್ ಗಳಿಸಿದರು. ನಾಲ್ಕು ಸಿಕ್ಸರ್‌ಗಳು, ಒಂದು ಬೌಂಡರಿ ಮತ್ತು ಒಂದು ಡಬಲ್ ಬಾರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



