Drink and Drive Case: ಆಸ್ಟ್ರೇಲಿಯಾದ ಲೆಜೆಂಡ್ ಡೇವಿಡ್ ವಾರ್ನರ್ ಬಂಧನ! ಕರಾಚಿ ಕಿಂಗ್ಸ್ ಗೆ ಹೊಡೆತ!
ತಪಾಸಣೆ ವೇಳೆಯಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರು ಡೇವಿಡ್ ವಾರ್ನರ್ ಅವರನ್ನು ಬಂಧಿಸಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ.

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಕುಡಿದು ವಾಹನ ಚಾಲನೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಸಿಡ್ನಿಯ ಮರೂಬ್ರಾದಲ್ಲಿ ನಡೆದ ಘಟನೆಯ ನಂತರ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಕೇಳಿಬಂದಿದೆ. ಪ್ರಸ್ತುತ ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕರಾಚಿ ಕಿಂಗ್ಸ್ ಪರ ಆಡುತ್ತಿದ್ದಾರೆ.
ತಪಾಸಣೆ ವೇಳೆಯಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರು ಡೇವಿಡ್ ವಾರ್ನರ್ ಅವರನ್ನು ಬಂಧಿಸಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ತಪಾಸಣೆ ಮಾಡುತ್ತಿದ್ದ ಸ್ಥಳ ತಲುಪುವ ಮುನ್ನ ವಾರ್ನರ್ ತನ್ನ ಕಾರನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಅಧಿಕಾರಿಗಳು ಕಾರನ್ನು ಎತ್ತಿಕೊಂಡು ಹೋಗಿದ್ದಾರೆ.
ಬಳಿಕ ಅವರನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಮಿತಿ ಮೀರಿ ಆಲ್ಕೋಹಾಲ್ ಸೇವಿಸಿರುವುದು ಕಂಡುಬಂದಿದೆ. ಬಳಿಕ ಪೊಲೀಸರು ವಾರ್ನರ್ ಅವರನ್ನು ಬಂಧಿಸಿ, ಮಾರೂಬ್ರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮುಂದಿನ ತಿಂಗಳು ಮೇ 7 ರಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗುವಂತೆ ಡೇವಿಡ್ ವಾರ್ನರ್ ಅವರಿಗೆ ಆದೇಶಿಸಲಾಗಿದೆ.
ಈ ಘಟನೆಯು PSL ನಲ್ಲಿ ಕರಾಚಿ ಕಿಂಗ್ಸ್ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಡೇವಿಡ್ ವಾರ್ನರ್ ಈ ತಂಡದ ನಾಯಕರಾಗಿದ್ದಾರೆ. ಕುಟುಂಬವನ್ನು ಭೇಟಿ ಮಾಡಲು ಪಂದ್ಯಾವಳಿಯಿಂದ ಸ್ವಲ್ಪ ದಿನಗಳವರೆಗೆ ವೈಯಕ್ತಿಕ ರಜೆಯನ್ನು ನೀಡಲಾಗಿತ್ತು.
ಕರಾಚಿ ಕಿಂಗ್ಸ್ ಸತತ ಮೂರು ಗೆಲುವಿನೊಂದಿಗೆ PSL ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಾರ್ನರ್ ಅವರ ಪಾತ್ರ ಪ್ರಮುಖವಾಗಿದೆ. ರಾವಲ್ಪಿಂಡಿಜ್ ವಿರುದ್ಧ ನಿರ್ಣಾಯಕ ಅರ್ಧಶತಕ ಸೇರಿದಂತೆ ಇದುವರೆಗೆ 93 ರನ್ ಗಳಿಸಿದ್ದಾರೆ.
ಏಪ್ರಿಲ್ 9 ರಂದು ಗುರುವಾರ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ vs ಪೇಶಾವರ್ ಝಲ್ಮಿ ವಿರುದ್ಧ ಪಂದ್ಯ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



