IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ; ಮುಂದಿನ ಎರಡು ಪಂದ್ಯಗಳಿಗೆ ರೋಹಿತ್ ಶರ್ಮಾ ಅಲಭ್ಯ?
ರೋಹಿತ್ ಶರ್ಮಾ ಸದ್ಯ ಆಡಿರುವ ನಾಲ್ಕು ಪಂದ್ಯಗಳಲ್ಲಿ 45.67 ಸರಾಸರಿ ಮತ್ತು 165.06 ಸ್ಟ್ರೈಕ್ ರೇಟ್‌ನಲ್ಲಿ 137 ರನ್ ಗಳಿಸಿದ್ದಾರೆ. ಅವರು ಒಂದು ಅರ್ಧಶತಕ ಗಳಿಸಿದ್ದಾರೆ.
ಐಪಿಎಲ್ 2026ನೇ ಆವೃತ್ತಿಯಲ್ಲಿ ಸತತ ಮೂರು ಸೋಲುಗಳನ್ನು ಕಂಡಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಂಡದ ಸ್ಟಾರ್ ಓಪನರ್ ರೋಹಿತ್ ಶರ್ಮಾ ಗಾಯದ ಕಾರಣದಿಂದಾಗಿ ಮುಂದಿನ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಮೂಲಗಳು NDTVಗೆ ತಿಳಿಸಿವೆ.
ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯದಿಂದ ಬಳಲುತ್ತಿದ್ದರು ಮತ್ತು ರಿಟೈರ್ಡ್ ಹರ್ಟ್ ಆಗಿ ಮೈದಾನದಿಂದ ಹೊರನಡೆದರು. ಆರ್‌ಸಿಬಿ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು 18 ರನ್‌ಗಳಿಂದ ಸೋಲು ಕಾಣುವ ಮೂಲಕ ಸತತ ಮೂರನೇ ಸೋಲು ಅನುಭವಿಸಿತು. ಮುಂಬೈ ಇದೀಗ ಏಪ್ರಿಲ್ 16 ರಂದು ಪಂಜಾಬ್ ಕಿಂಗ್ಸ್ ಮತ್ತು ಏಪ್ರಿಲ್ 20 ರಂದು ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸೆಣಸಲಿದೆ.
ರೋಹಿತ್ ಶರ್ಮಾ ಸದ್ಯ ಆಡಿರುವ ನಾಲ್ಕು ಪಂದ್ಯಗಳಲ್ಲಿ 45.67 ಸರಾಸರಿ ಮತ್ತು 165.06 ಸ್ಟ್ರೈಕ್ ರೇಟ್‌ನಲ್ಲಿ 137 ರನ್ ಗಳಿಸಿದ್ದಾರೆ. ಅವರು ಒಂದು ಅರ್ಧಶತಕ ಗಳಿಸಿದ್ದಾರೆ.
2026ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕಳಪೆ ಆರಂಭವನ್ನು ಪಡೆದಿದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ 14 ವರ್ಷಗಳ ಕಾಲ ಅಭಿಯಾನದ ಮೊದಲ ಪಂದ್ಯವನ್ನು ಗೆಲ್ಲದ ತನ್ನ ದಾಖಲೆಗೆ ಬ್ರೇಕ್ ಹಾಕಿತು. ಆದರೆ, ಅದಾದ ನಂತರ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡಿತು. ಇದೀಗ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.
ಗುರುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಗೆಲುವಿನ ಹಳಿಗೆ ಮರಳಲು ಮುಂಬೈ ಇಂಡಿಯನ್ಸ್ ತಂಡವು ತವಕಿಸುತ್ತಿದ್ದು, ಇದೀಗ ರೋಹಿತ್ ಶರ್ಮಾ ಅವರ ಅಲಭ್ಯತೆಯು ತಂಡಕ್ಕೆ ಸವಾಲಾಗಿ ಪರಿಣಮಿಸಿದೆ.
ಐಪಿಎಲ್ ಆರಂಭಕ್ಕೂ ಮುನ್ನ ಬಲಿಷ್ಠ ತಂಡವಾಗಿ ಹೊರಹೊಮ್ಮಿದ್ದ ಮುಂಬೈ ಇಂಡಿಯನ್ಸ್ ತಂಡ, 13 ಆವೃತ್ತಿಗಳಲ್ಲಿ ಇದೇ ಮೊದಲ ಬಾರಿಗೆ ಟೂರ್ನಮೆಂಟ್‌ನ ಮೊದಲ ಪಂದ್ಯವನ್ನು ಗೆದ್ದ ನಂತರವೂ ಕಳಪೆ ಪ್ರದರ್ಶನ ನೀಡಿದೆ.
ತಂಡದ ಪ್ರಮುಖ ಬೌಲರ್ ಆದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಧಿಕ ರನ್‌ಗಳನ್ನು ಬಿಟ್ಟುಕೊಡದಿದ್ದರೂ, ಈವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದಿರುವುದು ಬಹುತೇಕ ಎಲ್ಲರನ್ನೂ ಆಶ್ಚರ್ಯಕ್ಕೀಡುಮಾಡಿದೆ. ಅನುಭವಿ ಟ್ರೆಂಟ್ ಬೌಲ್ಟ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನೂ ಹೊಂದಿರುವ ಸೀಮ್ ಬೌಲಿಂಗ್ ದಾಳಿಯ ಪ್ರಭಾವ ಕಡಿಮೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

