ಕ್ರಿಕೆಟ್

ಗೆಲುವಿನ ಹಳಿಗೆ ಮರಳಿದ್ದ CSKಗೆ ತೀವ್ರ ಹಿನ್ನಡೆ; ಪ್ರಮುಖ ವೇಗಿ ಖಲೀಲ್ ಅಹ್ಮದ್ ಟೂರ್ನಿಯಿಂದಲೇ ಔಟ್!

ಸಿಎಸ್‌ಕೆ ಇಲ್ಲಿಯವರೆಗೆ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾಗವಹಿಸಿದ್ದ ಅಹ್ಮದ್, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು.

ಗೆಲುವಿನ ಹಳಿಗೆ ಮರಳಿದ್ದ CSKಗೆ ತೀವ್ರ ಹಿನ್ನಡೆ; ಪ್ರಮುಖ ವೇಗಿ ಖಲೀಲ್ ಅಹ್ಮದ್ ಟೂರ್ನಿಯಿಂದಲೇ ಔಟ್!
ಖಲೀಲ್ ಅಹ್ಮದ್
Published On :

ನವದೆಹಲಿ: ರುತುರಾಜ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಇದೀಗ ಸಂಕಷ್ಟ ಎದುರಾಗಿದ್ದು, ಗೆಲುವಿನ ಹಳಿಗೆ ಮರಳಿರುವಾಗಲೇ ತಂಡದ ಪ್ರಮುಖ ವೇಗಿ ಖಲೀಲ್ ಅಹ್ಮದ್ ಕ್ವಾಡ್ರೈಸ್ಪ್ಸ್ ಗಾಯದಿಂದಾಗಿ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ.

ಸಿಎಸ್‌ಕೆ ಇಲ್ಲಿಯವರೆಗೆ ಆಡಿರುವ ಎಲ್ಲ ಐದು ಪಂದ್ಯಗಳಲ್ಲಿ ಭಾಗವಹಿಸಿದ್ದ ಅಹ್ಮದ್, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದರು.

ಏಪ್ರಿಲ್ 14 ರಂದು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಹಿಂದಿನ ಪಂದ್ಯದ ಸಮಯದಲ್ಲಿ ಬಲಭಾಗದ ಸೊಂಟದಲ್ಲಿ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಇನಿಂಗ್ಸ್‌ ಮಧ್ಯದಲ್ಲಿಯೇ ಮೈದಾನ ತೊರೆದಿದ್ದರು.

ಪಂದ್ಯಾವಳಿಯ ಆರಂಭಿಕ ಹಂತದಲ್ಲಿ ಅವರು CSK ಪರ ಸ್ಥಿರ ಪ್ರದರ್ಶನ ನೀಡಿದವರಲ್ಲಿ ಒಬ್ಬರಾಗಿದ್ದರು.

'ನಂತರ ವೈದ್ಯಕೀಯ ಪರೀಕ್ಷೆಗಳು ಅದು ಗ್ರೇಡ್ 2 ಟಿಯರ್ (ಭಾಗಶಃ ಆದರೆ ಗಮನಾರ್ಹವಾದ ಸ್ನಾಯು ಗಾಯ) ಮತ್ತು ಆಟಗಾರನು ಚೇತರಿಸಿಕೊಳ್ಳಲು ಕನಿಷ್ಠ 10 ರಿಂದ 12 ವಾರಗಳು ತೆಗೆದುಕೊಳ್ಳುತ್ತದೆ' ಎಂದು IPL ಮೂಲಗಳು ತಿಳಿಸಿವೆ.

ಎಡಗೈ ವೇಗಿ ಭಾರತಕ್ಕಾಗಿ 11 ಏಕದಿನ ಮತ್ತು 18 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕೊನೆಯ ಬಾರಿಗೆ 2024ರ ಜುಲೈನಲ್ಲಿ ಭಾರತ ತಂಡದ ಪರ ಕಾಣಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.