IPL 2026: ಮುಂಬೈ ಗೆ ತವರಿನಲ್ಲಿ ಭಾರಿ ಮುಖಭಂಗ; ಪಂಜಾಬ್ ಗೆ 7 ವಿಕೆಟ್ ಜಯ
ಕೂಪರ್ ಕಾನೋಲಿ 12 ಎಸೆತಗಳಲ್ಲಿ 17 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 66 ರನ್ ಗಳಿಸಿದರು. ಮಾರ್ಕಸ್ ಸ್ಟೊಯಿನಿಸ್ 5 ಎಸೆತಗಳಲ್ಲಿ 10 ರನ್ ಗಳಿಸಿದರು.

ಮುಂಬೈ: ಮುಂಬೈ ನಲ್ಲಿ ನಡೆದ ಐಪಿಎಲ್ 2026 ನೇ ಟೂರ್ನಿಯ 24 ನೇ ಪಂದ್ಯದಲ್ಲಿ ಪಂಜಾಬ್ ತಂಡ ಮುಂಬೈ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಆಟಗಾರ ರಯಾನ್ ರಿಕೆಲ್ಟನ್ 8 ಎಸೆತಗಳಲ್ಲಿ 2 ರನ್ ಗಳಿಸಿ ಔಟಾದರು. ಆದರೆ ಮತ್ತೋರ್ವ ಆರಂಭಿಕ ಆಟಗಾರ ಕ್ವಿಂಟನ್ ಕ್ವಿಂಟನ್ ಡಿ ಕಾಕ್ ಅವರ 112 ರನ್ (60 ಎಸೆತ) ತಂಡಕ್ಕೆ ಚೇತರಿಕೆ ನೀಡಿತು. ಆದರೆ ಸೂರ್ಯಕುಮಾರ್ ಯಾದವ್ ರನ್ ಗಳಿಸದೇ ಔಟ್ ಆದದ್ದು ನಿರಾಶೆ ಮೂಡಿಸಿತು. ಬಳಿಕ ಕ್ರೀಸ್ ಗೆ ಬಂದ ನಮನ್ ಧೀರ್ 31 ಎಸೆತಗಳಲ್ಲಿ 50 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು.
196 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ 15 ರನ್ (9 ಎಸೆತ), ಪ್ರಭಸಿಮ್ರನ್ ಸಿಂಗ್ 80 ರನ್ (39 ಎಸೆತ) ಜೊತೆಯಾಟದಿಂದ ಉತ್ತಮ ಆರಂಭ ಸಿಕ್ಕಿತು.
ಕೂಪರ್ ಕಾನೋಲಿ 12 ಎಸೆತಗಳಲ್ಲಿ 17 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 66 ರನ್ ಗಳಿಸಿದರು. ಮಾರ್ಕಸ್ ಸ್ಟೊಯಿನಿಸ್ 5 ಎಸೆತಗಳಲ್ಲಿ 10 ರನ್ ಗಳಿಸಿದರು.
ಅಂತಿಮವಾಗಿ 16.3 ಓವರ್ ಗಳಲ್ಲಿ ಪಂಜಾಬ್ ತಂಡ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಗುರಿ ತಲುಪುವ ಮೂಲಕ ಮುಂಬೈ ತಂಡವನ್ನು ಅದರ ತವರಿನಲ್ಲೇ ಮಣಿಸಿದ್ದು ಅಂಕ ಪಟ್ಟಿಯಲ್ಲಿ ಮೇಲೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


